ನವದೆಹಲಿ :ಗುಡಿಸಲುಗಳಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದೆಹಲಿ ಅಗ್ನಿ ಶಾಮಕ ಇಲಾಖೆ ಮಾಹಿತಿ ನೀಡಿದೆ.
ಮೇಲ್ನೋಟಕ್ಕೆ ಸುಮಾರು 60 ಗುಡಿಸಲುಗಳಲ್ಲಿ ಬೆಂಕಿ ಕಾಣಿಸಿತ್ತು. ವಿಚಾರ ತಿಳಿದು 13 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ದೆಹಲಿ ಪೊಲೀಸ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.