ಕರ್ನಾಟಕ

karnataka

ETV Bharat / bharat

ಏರ್​​ ಇಂಡಿಯಾ ವಿಮಾನಗಳಿಗೆ ಬೆದರಿಕೆ.. ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

ಎರಡು ಏರ್​ ಇಂಡಿಯಾ ವಿಮಾನಗಳಿಗೆ ಸಂಘಟನೆಯೊಂದರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ನವದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ ನೀಡಲಾಗಿದೆ.

Delhi airport
ಇಂದಿರಾಗಾಂಧಿ ವಿಮಾನ ನಿಲ್ದಾಣ

By

Published : Nov 4, 2020, 10:58 PM IST

ನವದೆಹಲಿ:ಸಿಖ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) ಎಂಬ ನಿಷೇಧಿತ ಸಂಘಟನೆಯಿಂದ ಬೆದರಿಕೆ ಕರೆ ಬಂದ ನಂತರ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಐಜಿಐ) ಕ್ಕೆ ಬಿಗಿ ಭದ್ರತೆ ನೀಡಲಾಗಿದೆ.

ಎಸ್‌ಎಫ್‌ಜೆ ಸಂಘಟನೆಗೆ ಸೇರಿದವರು ಎನ್ನಲಾದ ಗುರ್ಪತ್ವಂತ್ ಸಿಂಗ್ ಪನ್ನುನ್​ ಎಂಬುವರು ದೆಹಲಿಯಿಂದ ಲಂಡನ್‌ಗೆ ವಿಮಾನಗಳು ತೆರಳುವುದಿಲ್ಲ, ಎಐ111 ಮತ್ತು ಎಐ531 ಅನ್ನು ಬಹಿಷ್ಕರಿಸುವಂತೆ ಬೆಂಬಲಿಗರಿಗೆ ಸೂಚಿಸಿದ ಕಾರಣಕ್ಕೆ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ ನೀಡಲಾಗಿದೆ ಎಂದು ವಿಮಾನ ನಿಲ್ದಾಣದ ಉಪ ಪೊಲೀಸ್ ಆಯುಕ್ತ ರಾಜೀವ್ ರಂಜನ್ ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದ ಭದ್ರತೆಯಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಏರ್ ಇಂಡಿಯಾ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ. ವಿಮಾನ ನಿಲ್ದಾಣ ಮತ್ತು ಸುತ್ತಮುತ್ತ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ ಎಂದು ಅವರ ಸ್ಪಷ್ಟನೆ ನೀಡಿದ್ದಾರೆ.

ಅಕ್ಟೋಬರ್ 5ರಂದು ಬೆದರಿಕೆ ಕರೆ ಬಂದಿದ್ದು, ವಿವಿಧ ಆಯಾಮಗಳಿಂದ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details