ಪಾಟ್ನಾ(ಬಿಹಾರ): ಪಾಟ್ನಾದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ (6E 2126) ಪ್ರಯಾಣಿಕನೊಬ್ಬ, ನನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿ ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ. ಸುದ್ದಿ ತಿಳಿದ ತಕ್ಷಣ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.
ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ವಿಮಾನದಲ್ಲಿ ಆತಂಕ ಸೃಷ್ಟಿಸಿದ ಪ್ರಯಾಣಿಕ - ಪಾಟ್ನಾದಲ್ಲಿ ತನ್ನ ಬ್ಯಾಗ್‌ನಲ್ಲಿ ಬಾಂಬ್ ಇತ್ತು ಎಂದು ಪ್ರಯಾಣಿಕ
ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿ ಆತಂಕ ಉಂಟುಮಾಡಿದ್ದಾನೆ.
ನನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಕೋಲಾಹಲ ಸೃಷ್ಟಿಸಿದ ಯುವಕ
ಇಂಡಿಗೋ ವಿಮಾನವು ರಾತ್ರಿ 8:20ಕ್ಕೆ ಪಾಟ್ನಾದಿಂದ ದೆಹಲಿಗೆ ಹೊರಡಬೇಕಿತ್ತು. ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕ ಹೇಳಿದ ಬಳಿಕ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ತಕ್ಷಣ ವಿಮಾನ ನಿಲ್ದಾಣಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಲಾಗಿದೆ. ಎಲ್ಲ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಿದ್ದು, ಯಾವುದೇ ರೀತಿ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದರು.
ಇದನ್ನೂಓದಿ:ಕೊಚ್ಚಿ ವಿಮಾನನಿಲ್ದಾಣದಲ್ಲಿ ಪ್ರಯಾಣಿಕನ ಕಿರಿಕ್; ತಪಾಸಣೆಗೆ ಸಿಟ್ಟಾಗಿ ಬ್ಯಾಗಲ್ಲಿ 'ಬಾಂಬ್' ಇದೆ ಎಂದ!
TAGGED:
Bihar news