ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಮ್ಮ ಸಾಕುಪ್ರಾಣಿಗಳನ್ನು ನೋಂದಾಯಿಸಿಕೊಳ್ಳುವಂತೆ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ನಗರವಾಸಿಗಳಿಗೆ ಸೂಚನೆ ನೀಡಿದೆ. ಅಷ್ಟೇ ಅಲ್ಲ, ನಿಯಮಾವಳಿಗಳನ್ನು ಅನುಸರಿಸದಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದೆ. ಆದರೆ, ಜನರು ಸಾಕುಪ್ರಾಣಿಗಳನ್ನು ನೋಂದಾಯಿಸಲು ಹಿಂಜರಿಯುತ್ತಿದ್ದಾರೆ ಎಂದು ಎಂಸಿಡಿಯ ಪಶುವೈದ್ಯಕೀಯ ವಿಭಾಗದ ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ನೋಯ್ಡಾ, ಗಾಜಿಯಾಬಾದ್ ಮತ್ತು ಇತರ ಪ್ರದೇಶಗಳಲ್ಲಿ ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಹೀಗಾಗಿ, ತಮ್ಮ ಸಾಕು ನಾಯಿಗಳನ್ನು ನೋಂದಾಯಿಸಲು ನಾಗರಿಕರನ್ನು ಪಾಲಿಕೆ ಒತ್ತಾಯಿಸುತ್ತಿದೆ. ದೆಹಲಿ ಮುನ್ಸಿಪಲ್ ಆ್ಯಕ್ಟ್ 1957 ರ ಸೆಕ್ಷನ್ 399 ರ ಅಡಿಯಲ್ಲಿ ಎಲ್ಲಾ ಸಾಕು ನಾಯಿಗಳನ್ನು ಕಾರ್ಪೊರೇಶನ್‌ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ.