ನವದೆಹಲಿ:ನಿನ್ನೆ ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡಿ, ರೈತರ ಎಲ್ಲಾ ಬೇಡಿಕೆಗಳನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಗೃಹ ಬಂಧನ - ಭಾರತ ಬಂದ್
10:52 December 08
ಸಿಂಘು ಗಡಿಗೆ ನಿನ್ನೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತೆರಳಿ ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡಿದ್ದರು. ಈ ಬಳಿಕ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿದೆ.
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರೋಧಿಸಿ ಕಳೆದೆರಡು ವಾರಗಳಿಂದ ಪಂಜಾಬ್, ಹರಿಯಾಣ ಮೂಲದ ರೈತರು 'ದೆಹಲಿ ಚಲೋ' ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರನ್ನು ದೆಹಲಿ ಪ್ರವೇಶಿಸಿದಂತೆ ಗಡಿ ಭಾಗಗಳಲ್ಲೇ ಪೊಲೀಸರು ತಡೆಯುತ್ತಿದ್ದಾರೆ.
ಓದಿ:ಡಿ.8ರ ಭಾರತ್ ಬಂದ್ಗೆ 'ಆಪ್'ಬಾಂಧವ ಕೇಜ್ರಿ.. ಕೃಷಿ ಕಾಯ್ದೆಗಳ ವಿರುದ್ಧ ಪೊರಕೆಯಿಂದಲೂ ಹೋರಾಟ
ದೆಹಲಿ-ಹರಿಯಾಣ ಗಡಿ ಭಾಗವಾದ ಸಿಂಘು ಗಡಿಗೆ ನಿನ್ನೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತೆರಳಿ ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡಿದ್ದರು. ಈ ಬಳಿಕ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಟ್ವೀಟ್ ಮಾಡಿದೆ. ಅವರ ಮನೆಯಿಂದ ಯಾರೂ ಹೊರಬರದಂತೆ, ಯಾರೂ ಒಳಬರದಂತೆ ತಡೆಯಲಾಗುತ್ತಿದೆ ಎಂದು ಎಎಪಿ ಆಕ್ರೋಶ ವ್ಯಕ್ತಪಡಿಸಿದೆ.
ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಉತ್ತರ ವಿಭಾಗ ಡಿಸಿಪಿ ಆಂಟೋ ಅಲ್ಫೋನ್ಸ್, ಆಮ್ ಆದ್ಮಿಯ ಹೇಳಿಕೆ ಸಂಪೂರ್ಣವಾಗಿ ತಪ್ಪಾಗಿದೆ. ಅವರು ದೆಹಲಿ ಮುಖ್ಯಮಂತ್ರಿಯಾಗಿದ್ದು, ಎಲ್ಲಿ ಬೇಕಾದರೂ ತಿರುಗಾಡಬಹುದು ಎಂದು ಹೇಳಿದ್ದಾರೆ.