ದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ರ್ಯಾಕ್ಟರ್ ಓಡಿಸುವ ಮೂಲಕ ಸಂಸತ್ನತ್ತ ಬಂದಿದ್ದಾರೆ.
ಕೃಷಿ ಕಾಯ್ದೆಗಳಿಗೆ ವಿರೋಧ: ಟ್ರ್ಯಾಕ್ಟರ್ ಓಡಿಸಿಕೊಂಡು ಸಂಸತ್ಗೆ ಬಂದ ರಾಹುಲ್ಗಾಂಧಿ
ಮೋದಿ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ರಾಹುಲ್ಗಾಂಧಿ
ಕಳೆದ ಎಂಟು ತಿಂಗಳಿಂದ ಮೋದಿ ಸರ್ಕಾರ ಜಾರಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಲಕ್ಷಾಂತರ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ವಿಪಕ್ಷಗಳು ಮೋದಿ ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಇವೆ.
ಇದೀಗ ಸಂಸತ್ ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪಿಸೋಕೆ ವಿಪಕ್ಷಗಳು ಮುಂದಾಗಿವೆ. ರಾಹುಲ್ ಗಾಂಧಿ ಟ್ರ್ಯಾಕ್ಟರ್ ಓಡಿಸಿಕೊಂಡು ಸಂಸತ್ಗೆ ಬರುವ ಮೂಲಕ ರೈತರಿಗೆ ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ.
Last Updated : Jul 26, 2021, 11:27 AM IST