ನವದೆಹಲಿ: ದೆಹಲಿ ಆಪ್ ಮುಖಂಡ ಸತ್ಯೇಂದರ್ ಜೈನ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರ ರಾಜಧಾನಿ ರೋಸ್ ಅವೆನ್ಯೂ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ಅಂಗೀಕರಿಸಿದೆ. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಈ ಹಿಂದೆ ವಿಚಾರಣೆ ನಡೆಸಿದ್ದ ಈ ಪ್ರಕರಣವನ್ನು ಇನ್ನು ಮುಂದೆ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ವಿಚಾರಣೆ ನಡೆಸಲಿದ್ದಾರೆ.
ಇಡಿ ವಾದದ ವೇಳೆ ಸುಳ್ಳು ವೈದ್ಯಕೀಯ ವರದಿಗಳನ್ನು ಬಳಸಿಕೊಂಡು ವೈದ್ಯಕೀಯ ಜಾಮೀನು ಪಡೆಯುವ ಪ್ರಯತ್ನ ನಡೆದಿದೆ ಎಂದು ಎಎಸ್‌ಜಿ ಎಸ್‌ವಿ ರಾಜು ದೂರು ಸಲ್ಲಿಸಿದರು. ನ್ಯಾಯಾಲಯ ಯಾವುದೇ ಕ್ರಮ ಕೈಗೊಂಡಿಲ್ಲ. ಅವರು ಸಚಿವರಾಗಿ ದೆಹಲಿ ಕಾರಾಗೃಹಗಳನ್ನು ಸಹ ನಿರ್ವಹಿಸುತ್ತಿದ್ದಾರೆ. ಅವರು ಅಧಿಕಾರ, ಹಣ ಮತ್ತು ಪ್ರಭಾವವನ್ನು ಬಳಸಬಹುದು. ಅದಕ್ಕಾಗಿ ಪ್ರಕರಣ ವರ್ಗಾವಣೆಗೆ ಕೋರಿದ್ದರು.
ಸತ್ಯೇಂದ್ರ ಜೈನ್ ಅವರ ಮನಿ ಲಾಂಡರಿಂಗ್ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಒತ್ತಾಯಿಸಿ ಇಡಿ, ರೂಸ್ ಅವೆನ್ಯೂ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಅರ್ಜಿ ಸಲ್ಲಿಸಿತ್ತು.