ನವದೆಹಲಿ: ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ದೆಹಲಿ ಕೋರ್ಟ್ನಿಂದ ಸಮನ್ಸ್ ಜಾರಿಯಾಗಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯದಿಂದ ಆರೋಪ ಪಟ್ಟಿ ದಾಖಲಾಗಿರುವ ಬೆನ್ನಲ್ಲೇ ಈ ಸಮನ್ಸ್ ಜಾರಿ ಮಾಡಲಾಗಿದೆ.
2018ರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯ ಇಂದು ಸಮನ್ಸ್ ನೀಡಿದ್ದು, ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ದೆಹಲಿ ಕೋರ್ಟ್ನ ವಿಶೇಷ ನ್ಯಾಯಾಧೀಶ ವಿಕಾಸ್ ಧುಲೆ ಡಿಕೆ ಶಿವಕುಮಾರ್ ಅವರಿಗೆ ನಿರ್ದೇಶನ ನೀಡಿದ್ದಾರೆ.
ಡಿಕೆ ಶಿವಕುಮಾರ್ ಜೊತೆಗೆ ಸಚಿನ್ ನಾರಾಯಣ್, ಸುನೀಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರಗೆ ಸಮನ್ಸ್ ನೀಡಲಾಗಿದೆ. ಜೂನ್ 1ರಂದು ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಕಳೆದ ವಾರ ಡಿಕೆಶಿ ಮತ್ತು ಇತರ ನಾಲ್ವರು ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಟ್ಶೀಟ್ ಸಲ್ಲಿಕೆ ಮಾಡಿದ್ದರು. ಇದೇ ವಿಚಾರವಾಗಿ ಕಾಂಗ್ರೆಸ್ ಆಡಳಿತರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತ್ತು.