ನವದೆಹಲಿ: ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿರುವ ಸಿಸೋಡಿಯಾ ಅವರ ಅಧಿಕೃತ ನಿವಾಸ ಸೇರಿದಂತೆ ಎನ್‌ಸಿಆರ್‌ನ 20 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಅಬಕಾರಿ ಹಗರಣ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಒಳ್ಳೆಯ ಕೆಲಸ ಮಾಡುವವರನ್ನು ಯಾವಾಗಲೂ ಟಾರ್ಗೆಟ್ ಮಾಡಲಾಗುತ್ತದೆ ಎಂದು ಸಿಬಿಐ ದಾಳಿ ವೇಳೆ ಮನೀಶ್ ಸಿಸೋಡಿಯಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಬಿಐ ದಾಳಿ ನಡೆದಿದೆ. ಆದರೆ ನಾವು ಪ್ರಾಮಾಣಿಕರು, ಲಕ್ಷಾಂತರ ಮಕ್ಕಳ ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ. ದುರದೃಷ್ಟವಶಾತ್, ಈ ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ಕಿರುಕುಳ ನೀಡಲಾಗುತ್ತದೆ. ಆದ್ದರಿಂದ ನಮ್ಮ ದೇಶ ಇನ್ನೂ ನಂಬರ್-1 ಆಗಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಒಳ್ಳೆಯ ಕೆಲಸ ಮಾಡುವವರಿಗೆ ಟಾರ್ಗೆಟ್ ಎಂದ ಡಿಸಿಎಂ: ಸಿಸೋಡಿಯಾ ಸರಣಿ ಟ್ವೀಟ್ ಮಾಡಿದ್ದಾರೆ. ಸಿಬಿಐ ದಾಳಿ ಸ್ವಾಗತಾರ್ಹ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೆಹಲಿ ಸರ್ಕಾರ ಮಾಡಿರುವ ಅತ್ಯುತ್ತಮ ಕೆಲಸದಿಂದಾಗಿ ಈ ಜನರು ತೊಂದರೆಗೀಡಾಗಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಉತ್ತಮ ಕೆಲಸದಿಂದ ನಮ್ಮನ್ನು ತಡೆಯಲು ಅವರ ಗುರಿಯಾಗಿದೆ. ನಮ್ಮಿಬ್ಬರ ಮೇಲಿನ ಆರೋಪ ಸುಳ್ಳು. ನ್ಯಾಯಾಲಯದಲ್ಲಿ ಸತ್ಯ ಹೊರಬರಲಿದೆ ಎಂದು ಮನೀಶ್ ಸಿಸೋಡಿಯಾ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ಧ ಆರೋಪಿಸಿದರು.
ಸಿಬಿಐ ದಾಳಿ ಸ್ವಾಗತಿಸಿದ ಅರವಿಂದ್ ಕೇಜ್ರಿವಾಲ್: ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ ಸಿಬಿಐ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದಾರೆ. ಸಿಬಿಐ ದಾಳಿ ಸ್ವಾಗತಾರ್ಹ. ಈ ವಿಚಾರದಲ್ಲಿ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಇವತ್ತಿಗೂ ಸಾಕಷ್ಟು ಹುಡುಕಾಟಗಳು ಮತ್ತು ದಾಳಿಗಳು ನಡೆದಿವೆ. ಆದರೆ, ಏನೂ ಕಂಡು ಬಂದಿಲ್ಲ ಮತ್ತು ಇನ್ನೂ ಏನೂ ಸಿಗುವುದಿಲ್ಲ ಎಂದು ಹೇಳಿದರು.