ಕರ್ನಾಟಕ

karnataka

ETV Bharat / bharat

ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿದ ಕಳ್ಳರು.. ಮೂರು ಕೋಟಿ ರೂ. ಲೂಟಿ ಮಾಡಿದ ಮೂವರು ಖದೀಮರು ಅರೆಸ್ಟ್​ - ಬಾಬಾ ಹರಿದಾಸ್ ನಗರ

ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ನಗರ ಪ್ರದೇಶದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಂತೆ ನಟಿಸಿ ದರೋಡೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Gang of five robs man of Rs 3 crore  Gang of five robs man of Rs 3 crore posing as ED  3 crore looted in New Delhi  ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿದ ಕಳ್ಳರು  ಮೂರು ಕೋಟಿ ಲೂಟಿ  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ  ದುಷ್ಕರ್ಮಿಗಳು ಜಾರಿ ನಿರ್ದೇಶನಾಲಯ  ಬಾಬಾ ಹರಿದಾಸ್ ನಗರ  ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಡಿ ಅಧಿಕಾರಿಗಳಂತೆ ನಟಿಸಿ
ಮೂರು ಕೋಟಿ ಲೂಟಿ, ಮೂವರು ಬಂಧನ

By PTI

Published : Oct 16, 2023, 10:16 AM IST

ನವದೆಹಲಿ:ಪಶ್ಚಿಮ ದಿಲ್ಲಿಯ ಬಾಬಾ ಹರಿದಾಸ್ ನಗರದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯೊಬ್ಬರ ಸೋಗಿನಲ್ಲಿ ಕೋಟಿ ಕೋಟಿ ರೂಪಾಯಿಗಳನ್ನು ಲೂಟಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಬಾ ಹರಿದಾಸ್ ನಗರದಲ್ಲಿರುವ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಡಿ ಅಧಿಕಾರಿಗಳಂತೆ ನಟಿಸಿದ್ದಾರೆ. ಬಳಿಕ 3.20 ಕೋಟಿ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಇದರ ನಂತರ, ಸಂತ್ರಸ್ತ ಪಿಸಿಆರ್​ಗೆ ಕರೆ ಮಾಡಿ ಘಟನೆಯ ಬಗ್ಗೆ ತಿಳಿಸಿದ್ದಾರೆ ಎಂದು ಪೊಲೀಸರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಆರು ಮಂದಿ ನನ್ನ ಮನೆಗೆ ಬಂದು ನಾವು ಇಡಿ ಇಲಾಖೆಯವರು ಎಂದು ಹೇಳಿ ನನ್ನ ಮನೆಯಿಂದ 3 ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ ಅಂತಾ ಸಂತ್ರಸ್ತ ಕರೆಯಲ್ಲಿ ತಿಳಿಸಿದ್ದಾರೆ. ದುಷ್ಕರ್ಮಿಗಳು ಎರಡು ಕಾರುಗಳಲ್ಲಿ ಬಂದಿದ್ದು, ಅವರೆಲ್ಲರ ಬಳಿ ಬಂದೂಕುಗಳಿದ್ದವು ಎಂದು ದೂರುದಾರ ರವಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸಂತ್ರಸ್ತ ರವಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತಂಡ ರಚಿಸಿ ತನಿಖೆ ಆರಂಭಿಸಿದ್ದರು. ತನಿಖೆಯ ನಂತರ, ಪೊಲೀಸರು ಆರು ಆರೋಪಿಗಳಲ್ಲಿ ಒಬ್ಬನನ್ನು ಹರಿಯಾಣದ ಗೊಹಾನಾದಿಂದ ಬಂಧಿಸಲಾಗಿದ್ದು, ಆತನನ್ನು ಅಮಿತ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು 70 ಲಕ್ಷ ನಗದು, ಪಿಸ್ತೂಲ್ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಇದರ ನಂತರ ಅಮಿತ್ ವಿಚಾರಣೆಯ ಸಮಯದಲ್ಲಿ ಇಬ್ಬರು ಆರೋಪಿಗಳಾದ ರೋಹಿತ್ (21) ಮತ್ತು ಮನೀಶ್ ಹೆಸರುಗಳನ್ನು ಉಲ್ಲೇಖಿಸಿದ್ದಾನೆ. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಅವರಿಬ್ಬರನ್ನು ಪತ್ತೆ ಮಾಡಿ ಬಂಧಿಸಿದರು. ಬಳಿಕ ಅವರಿಂದ ಸ್ವಲ್ಪ ಹಣವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಮೂವರು ಆರೋಪಿಗಳನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದರೋಡೆಯಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳು ಮತ್ತು ಇತರರನ್ನು ವಿಚಾರಣೆ ನಡೆಸುತ್ತಿರುವ ಪೊಲೀಸ್ ತಂಡವು ದುಷ್ಕರ್ಮಿಗಳ ಹುಡುಕಾಟಕ್ಕಾಗಿ ಹಲವೆಡೆ ದಾಳಿ ನಡೆಸುತ್ತಿದೆ. ಇತರ ಆರೋಪಿಗಳನ್ನು ಬಂಧಿಸಲು ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ದಾಳಿ ನಡೆಸಲಾಗುತ್ತಿದೆ. ದರೋಡೆಯಾದ 3.20 ಕೋಟಿ ರೂಪಾಯಿಗಳಲ್ಲಿ ಇದುವರೆಗೆ 1.27 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. ಸದ್ಯ ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಾಕಿ ಉಳಿದ ಆರೋಪಿಗಳ ಪತ್ತೆ ಕಾರ್ಯ ಚುರುಕುಗೊಳಿಸಿದ್ದಾರೆ.

ಓದಿ:ಕೋಳಿ ಮಾಂಸ ಹಿಡ್ಕೊಂಡು ಬಸ್ ಹತ್ತಿದ ಪ್ರಯಾಣಿಕ: ರೂಲ್ಸ್ ಬ್ರೇಕ್ ಎಂದು ಪೊಲೀಸ್ ಠಾಣೆಗೆ ಕರ್ಕೊಂಡು ಹೋದ ನಿರ್ವಾಹಕ

ABOUT THE AUTHOR

...view details