ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ, ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳಿಂದ ಮಕ್ಕಳು ಸೋಂಕಿಗೆ ಗುರಿಯಾಗುತ್ತಿರುವ ಬಗ್ಗೆ ಪೋಷಕರಿಂದ ನನಗೆ ಮಾಹಿತಿ ಬಂದಿದೆ. ಶಾಲೆಗಳಿಗಾಗಿಯೇ ಶುಕ್ರವಾರ ಸಾಮಾನ್ಯ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು. ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಹೆಚ್ಚಾಗಿದೆ.
ಆದರೆ, ಆಸ್ಪತ್ರೆಗೆ ದಾಖಲಾಗುವರರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಗಾಬರಿಪಡುವ ಅವಶ್ಯಕತೆ ಇಲ್ಲ. ಸ್ವಲ್ವ ಎಚ್ಚರ ವಹಿಸಿದರೆ ಸಾಕು. ಈಗಾಗಲೇ ನಾವು ಕೋವಿಡ್ನೊಂದಿಗೆ ಜೀವಿಸುವುದನ್ನು ಕಲಿತಿದ್ದೇವೆ. ಜತೆಗೆ ಸರ್ಕಾರ ಕೂಡಾ ನಿರಂತರವಾಗಿ ಪರಿಸ್ಥಿತಿ ಮೇಲೂ ನಿಗಾ ವಹಿಸಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಬುಧವಾರ ಒಂದೇ ದಿನ ಹೊಸದಾಗಿ 299 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, ಖಾಸಗಿ ಶಾಲೆಯ ಓರ್ವ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಸೋಂಕು ತಗುಲಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡಿದೆ.
ಇದನ್ನೂ ಓದಿ:'ಜಿಲ್ಲಾಧಿಕಾರಿಯ ಕಪಾಳಕ್ಕೆ ಬಾರಿಸಿದರೆ ರಾಜಕಾರಣಿ': ಬಿಜೆಪಿ ಸಂಸದನ 'ರಾಜಕೀಯ ಪಾಠ'!