ನವದೆಹಲಿ: ಸಾರ್ವಜನಿಕ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ಮಹತ್ವದ ಘೋಷಣೆ ಮಾಡಿದೆ. ಜನವರಿ 1ರಿಂದ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ 450 ವಿವಿಧ ರೀತಿಯ ವೈದ್ಯಕೀಯ ಪರೀಕ್ಷೆಗಳ ಮಾಡಲಾಗುವುದು. ಈ ಕಾರ್ಯಕ್ರಮವು ಖಾಸಗಿ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗದವರಿಗೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಪ್ರಸ್ತುತ ನಗರಾಡಳಿತದಿಂದ ಉಚಿತವಾಗಿ 212 ವೈದ್ಯಕೀಯ ಪರೀಕ್ಷೆಗಳ ಮಾಡಲಾಗುತ್ತಿದೆ. ಇದೀಗ ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಇನ್ನೂ 238 ಪರೀಕ್ಷೆಗಳನ್ನು ಉಚಿತವಾಗಿ ಮಾಡುವ ಆರೋಗ್ಯ ಇಲಾಖೆಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಕೇಜ್ರಿವಾಲ್ ಒಪ್ಪಿಗೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.