ನವದೆಹಲಿ: ಸೆಂಟ್ರಲ್ ವಿಸ್ತಾ ರಾಷ್ಟ್ರೀಯ ಯೋಜನೆಯಾಗಿದ್ದು ಇದು ಅಗತ್ಯವಾಗಿದೆ. ಈ ಯೋಜನೆಯಡಿ ನಡೆಯುತ್ತಿರುವ ನಿರ್ಮಾಣ ಕಾರ್ಯವನ್ನು ಮುಂದುವರಿಸಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದ್ದು, ಕಾಮಗಾರಿ ರದ್ದತಿ ಕೋರಿದ್ದ ಅರ್ಜಿದಾರರಿಗೆ ನ್ಯಾಯಾಲಯ ₹1 ಲಕ್ಷ ದಂಡ ವಿಧಿಸಿದೆ.
ಸೆಂಟ್ರಲ್ ವಿಸ್ತಾ ಕಾಮಗಾರಿ ರದ್ದತಿ ಕೋರಿದ್ದ ಅರ್ಜಿದಾರನಿಗೆ 1 ಲಕ್ಷ ರೂ. ದಂಡ
ಸೆಂಟ್ರಲ್ ವಿಸ್ತಾ ಯೋಜನೆಯನ್ನು ಕೈಬಿಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ ತಿರಸ್ಕರಿಸಿದೆ.
ಸೆಂಟ್ರಲ್ ವಿಸ್ತಾ
ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಕೈಬಿಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ, ಇದೊಂದು ಪ್ರಚೋದಿತ ಅರ್ಜಿಯಾಗಿದ್ದು, ಇದರಲ್ಲಿ ನಿಜವಾದ ಸಾರ್ವಜನಿಕ ಹಿತಾಸಕ್ತಿಯಿಲ್ಲ ಎಂದು ಗರಂ ಆಗಿದೆ.
ಶಾಪೂರ್ಜಿ ಪಲ್ಲೊಂಜಿ ಗ್ರೂಪ್‌ಗೆ ನೀಡಲಾದ ಒಪ್ಪಂದದ ಪ್ರಕಾರ, ನವೆಂಬರ್ 2021 ರೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕಿದೆ ಮತ್ತು ಅದನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.