ಕರ್ನಾಟಕ

karnataka

ETV Bharat / bharat

ಪಿಎಂಎಲ್‌ಎ ಪ್ರಕರಣ ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್​ಗೆ ಡಿಕೆಶಿ ಅರ್ಜಿ ಸಲ್ಲಿಕೆ.. ಇಡಿಗೆ ನೋಟಿಸ್​

ಅಕ್ರಮ ಹಣ ವರ್ಗಾವಣೆ (ಪಿಎಂಎಲ್‌ಎ) ಕೇಸ್​ನ್ನು ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್​ಗೆ ಡಿಕೆಶಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರ್ಟ್​ ಇಡಿಗೆ ನೋಟಿಸ್​ ನೀಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​​
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​​

By

Published : Nov 2, 2022, 3:52 PM IST

ನವದೆಹಲಿ: ತಮ್ಮ ವಿರುದ್ಧ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ (ಪಿಎಂಎಲ್‌ಎ) ಕೇಸ್​ನ್ನು ರದ್ದುಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​​ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಇದರ ಬಗ್ಗೆ ವಿಚಾರಿಸುವಂತೆ ದೆಹಲಿ ಹೈಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಮುಕ್ತಾ ಗುಪ್ತ ಮತ್ತು ನ್ಯಾಯಮೂರ್ತಿ ಅನೀಶ್ ದಯಾಳ್ ಅವರ ವಿಭಾಗೀಯ ಪೀಠವು ವಿಚಾರಣೆ ನಡೆಸಿದೆ. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಲವಂತದ ಕ್ರಮಕ್ಕೆ ತಡೆಯಾಜ್ಞೆ ನೀಡಲಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 15ರೊಳಗೆ ಉತ್ತರವನ್ನು ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ನ್ಯಾಯಾಲಯ ಸೂಚಿಸಿದೆ.

ಹೊಸ ಪಿಎಂಎಲ್‌ಎ ತನಿಖೆ ಒಂದೇ ರೀತಿಯ ಸತ್ಯಗಳನ್ನು ಆಧರಿಸಿದೆ ಮತ್ತು ಅವರ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಡಿಕೆಶಿ ಪರ ವಕೀಲರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಓದಿ:ರಾಜ್ಯದಲ್ಲಿ 40% ಭ್ರಷ್ಟಾಚಾರ ತಾಂಡವ ಆಡುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​

ABOUT THE AUTHOR

...view details