ನವದೆಹಲಿ:ಮಹಾಮಾರಿ ಕೊರೊನಾ ವೈರಸ್ನಿಂದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ತಂದೆ ಸಾವನ್ನಪ್ಪಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಕೋವಿಡ್ ಸೋಂಕಿಗೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಂದೆ ಬಲಿ - COVID-19 in Delhi
15:01 May 02
ಮಹಾಮಾರಿ ಕೊರೊನಾಗೆ ಬಲಿಯಾದ ದೆಹಲಿ ಆರೋಗ್ಯ ಸಚಿವರ ತಂದೆ
ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ಪ್ರತಿದಿನ ದಾಖಲೆಯ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ನೂರಾರು ಜನರು ಮಹಾಮಾರಿ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಇದೀಗ ಆರೋಗ್ಯ ಸಚಿವರ ತಂದೆಯನ್ನು ಸಹ ಕೊರೊನಾ ಬಲಿ ಪಡೆದಿದೆ.
56 ವರ್ಷದ ರಾಮ್ ಶರಣ್ ಜೈನ್ ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೊಳಗಾಗಿದ್ದರು. ಅವರನ್ನ ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಸಿಎಂ ಕೇಜ್ರಿವಾಲ್ ಸಂತಾಪ ಸೂಚಿಸಿದ್ದಾರೆ.
ದೆಹಲಿಯಲ್ಲಿ ಇಂದು ಕೂಡ ದಾಖಲೆಯ 25 ಸಾವಿರಕ್ಕೂ ಅಧಿಕ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 400ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.