ನವದೆಹಲಿ:ಪರಿಸರ ಕಾರ್ಯಕರ್ತೆ ದಿಶಾ ರವಿ ಅವರ ಮಾಹಿತಿ ಗೌಪ್ಯತೆ ಮತ್ತು ವಾಕ್ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಈ ಹಿಂದೆ, ನನ್ನ ವಿರುದ್ಧ ದಾಖಲಾದ ಎಫ್ಐಆರ್ಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಮಾಧ್ಯಮಗಳಿಗೆ ನೀಡದಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಕೋರಿ ದಿಶಾ ರವಿ ಗುರುವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಸದ್ಯ ಹೈಕೋರ್ಟ್ ಮನವಿಯನ್ನು ಪರಿಶೀಲಿಸಿದ್ದು, ಹಕ್ಕಿನ ರಕ್ಷಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.