ಕರ್ನಾಟಕ

karnataka

ETV Bharat / bharat

ನ್ಯಾಯಮೂರ್ತಿಗೆ ಮರಣದಂಡನೆ ವಿಧಿಸಿ ಎಂದು ಅರ್ಜಿ: ವ್ಯಕ್ತಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

ತನ್ನ ಅರ್ಜಿಯನ್ನು ತಿರಸ್ಕರಿಸಿದ್ದ ನ್ಯಾಯಮೂರ್ತಿಗೆ ಮರಣದಂಡನೆ ವಿಧಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ ದೆಹಲಿ ಹೈಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

Etv Bharatdelhi-high-court-sentences-man-to-six-months-imprisonment-for-contempt-of-court
ನ್ಯಾಯಮೂರ್ತಿಗೆ ಮರಣದಂಡನೆ ವಿಧಿಸಿ ಎಂದು ಅರ್ಜಿ: ವ್ಯಕ್ತಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

By ETV Bharat Karnataka Team

Published : Nov 1, 2023, 9:48 PM IST

ನವದೆಹಲಿ:ತನ್ನ ಅರ್ಜಿಯನ್ನು ತಿರಸ್ಕರಿಸಿದ್ದಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗೆ ಮರಣದಂಡನೆ ವಿಧಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ, ದೆಹಲಿ ಹೈಕೋರ್ಟ್ ಇಂದು ನ್ಯಾಯಾಂಗ ನಿಂದನೆ ಆರೋಪದಡಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನರೇಶ್ ಶರ್ಮಾ ಶಿಕ್ಷೆಗೊಳಗಾದ ವ್ಯಕ್ತಿ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಶಾಲಿಂದರ್ ಕೌರ್ ಅವರ ವಿಭಾಗೀಯ ಪೀಠವು ನರೇಶ್ ಶರ್ಮಾ ಅವರು ತಮ್ಮ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿಗೆ ಅವಹೇಳನಕಾರಿ ಭಾಷೆ ಬಳಸಿದ್ದಾರೆ ಮತ್ತು ನ್ಯಾಯಮೂರ್ತಿಯನ್ನು ಕಳ್ಳ ಎಂದು ಕರೆದಿದ್ದಾರೆ. ಶರ್ಮಾ ಅವರು ತಮ್ಮ ಈ ನಡತೆ ಮತ್ತು ಕಾರ್ಯಕ್ಕೆ ಪಶ್ಚಾತ್ತಾಪಪಟ್ಟಿಲ್ಲ. ಜೊತೆಗೆ ಅವರು ಬೇಷರತ್ ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ. ಹೀಗಾಗಿ ನ್ಯಾಯಾಂಗ ನಿಂದನೆ ಕಾಯಿದೆ,1971ರ ಅಡಿ ಅವರನ್ನು ಅಪರಾಧಿ ಎಂದು ಪರಿಗಣಿಸುತ್ತೇವೆ ಎಂದು ಪೀಠ ಹೇಳಿದೆ.

2 ಸಾವಿರ ರೂಪಾಯಿ ದಂಡ ಹಾಗೂ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ. ಅಲ್ಲದೆ, ದಂಡವನ್ನು ಪಾವತಿಸದಿದ್ದಲ್ಲಿ ಅವರು ಏಳು ದಿನಗಳ ಹೆಚ್ಚುವರಿ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ನರೇಶ್ ಶರ್ಮಾ ಅವರನ್ನು ಕಸ್ಟಡಿಗೆ ತೆಗೆದುಕೊಂಡು ತಿಹಾರ್ ಜೈಲಿಗೆ ಒಪ್ಪಿಸುವಂತೆ ಪೀಠ ಸೂಚಿಸಿದೆ.

ಈ ಅರ್ಜಿಯ ವಿಚಾರಣೆಯಲ್ಲಿ ಹೆಚ್ಚುವರಿ ಸ್ಥಾಯಿ ಸಲಹೆಗಾರ (ಕ್ರಿಮಿನಲ್) ಸಂಜೀವ್ ಭಂಡಾರಿ ಮತ್ತು ವಕೀಲರಾದ ಕುನಾಲ್ ಮಿತ್ತಲ್, ಅರ್ಜಿತ್ ಸಿಂಗ್ ಮತ್ತು ರಿಷಿಕಾ GNCTDಅನ್ನು ಪ್ರತಿನಿಧಿಸಿದ್ದರು. ಕೇಂದ್ರ ಸರ್ಕಾರದ ಸ್ಥಾಯಿ ವಕೀಲ (ಸಿಜಿಎಸ್‌ಸಿ) ರಾಕೇಶ್ ಕುಮಾರ್ ಮತ್ತು ವಕೀಲ ಸುನಿಲ್ ಭಾರತ ಸರ್ಕಾರವನ್ನು ಪ್ರತಿನಿಧಿಸಿದ್ದರು.

ಏನಿದು ಪ್ರಕರಣ?:ಶರ್ಮಾ ಅವರು ಸ್ವಾತಂತ್ರ್ಯದ ನಂತರ ಭಾರತ ಸರ್ಕಾರ ಮಾಡಿರುವ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು. ಜುಲೈ 27, 2023 ರಂದು ಅವರ ಅರ್ಜಿಯನ್ನು ಏಕಸದಸ್ಯ ಪೀಠ ತಿರಸ್ಕರಿಸಿತ್ತು. ನಂತರ ಶರ್ಮಾ ಈ ತೀರ್ಪಿನ ವಿರುದ್ಧ ಮೇಲ್ಮನವಿ ಅರ್ಜಿ ಸಲ್ಲಿಸಿದರು. ಈ ಅರ್ಜಿ ಆಗಸ್ಟ್ 31 ರಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಏಕಸದಸ್ಯ ನ್ಯಾಯ ಪೀಠ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯದ ವಿರುದ್ಧ ಶರ್ಮಾ ಮಾಡಿದ್ದ ಆಧಾರರಹಿತ ಮತ್ತು ವಿಚಿತ್ರ ಆರೋಪಗಳನ್ನೊಳಗೊಂಡ ಮೂರು ಮೇಲ್ಮನವಿಗಳನ್ನು ನ್ಯಾಯಾಲಯವು ಪರಿಶೀಲಿಸಿತ್ತು. ನಂತರ ನ್ಯಾಯಾಲಯವು ಶರ್ಮಾ ಅವರಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆಗಾಗಿ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು.

ಇದನ್ನೂ ಓದಿ:ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ABOUT THE AUTHOR

...view details