ಕರ್ನಾಟಕ

karnataka

ETV Bharat / bharat

ಡೆಲ್ಲಿ ಲೆಪ್ಟಿನೆಂಟ್​ ಗವರ್ನರ್ ಅನಿಲ್​ ಬೈಜಲ್ ರಾಜೀನಾಮೆ

ಡೆಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್​​ ಜೊತೆ ಮುಸುಕಿನ ಗುದ್ದಾಟ ಮುಂದುವರೆಸಿದ್ದ ಲೆಪ್ಟಿನೆಂಟ್​​ ಗವರ್ನರ್​ ಅನಿಲ್​ ಬೈಜಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ವರದಿಯಾಗಿದೆ.

Delhi LG Anil Baijal resigns
Delhi LG Anil Baijal resigns

By

Published : May 18, 2022, 5:35 PM IST

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜೀನಾಮೆ ಪತ್ರವನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರಿಗೆ ಸಲ್ಲಿಕೆ ಮಾಡಿದ್ದಾರೆಂದು ವರದಿಯಾಗಿದೆ. ವೈಯಕ್ತಿಕ ಕಾರಣ ನೀಡಿ, ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

2008ರಲ್ಲಿ ನಜೀಬ್ ಜಂಗ್ ರಾಜಿನಾಮೆಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿಯಾಗಿದ್ದ ಅನಿಲ್ ಬೈಜಾಲ್ ನೇಮಕಗೊಂಡಿದ್ದರು. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿದ್ದ, 1969ರ ಐಎಎಸ್ ಅಧಿಕಾರಿ ಬೈಜಾಲ್, ಹಲವು ಸಚಿವಾಲಯಗಳಲ್ಲಿ ಪ್ರಮುಖ ಸ್ಥಾನಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದರು.

2006ರಲ್ಲಿ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಯಾಗಿ ಅವರು ನಿವೃತ್ತರಾಗಿದ್ದರು. ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ನಜೀಬ್​ ಜಂಗ್ ಅನಿರೀಕ್ಷಿತವಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ಆ ಸ್ಥಾನಕ್ಕೆ ಆಯ್ಕೆಯಾಗಿದ್ದರು. ದೆಹಲಿ ಲೆಪ್ಟಿನೆಂಟ್ ಗವರ್ನರ್ ಆಗಿ ಆಯ್ಕೆಯಾದ ಬಳಿಕ ಸಿಎಂ ಕೇಜ್ರಿವಾಲ್ ಹಾಗೂ ಇವರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇತ್ತು. ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರ ನಿವಾಸದ ಎದುರು ಅರವಿಂದ್ ಕೇಜ್ರಿವಾಲ್ ಹಾಗೂ ಮೂವರು ಸಂಪುಟ ಸಹೋದ್ಯೋಗಿಗಳು ಧರಣಿ ಸಹ ನಡೆಸಿದ್ದರು.

ಇದನ್ನೂ ಓದಿ:75 ವರ್ಷಗಳ ಬಳಿಕ ಪಾಕ್​​​ಗೆ ಮರಳಲಿರುವ 90ರ ವೃದ್ಧೆ; ಇದು ಮತ್ತೊಂದು ಬಜರಂಗಿ ಭಾಯಿಜಾನ್ ರಿಯಲ್​ ಕಥೆ!

ABOUT THE AUTHOR

...view details