ನವದೆಹಲಿ: ಕೊರೊನಾ ಸೋಂಕು ಪ್ರಕರಣಗಳು ದೇಶಾದ್ಯಂತ ಹೆಚ್ಚುತ್ತಿರುವುದರಿಂದ, ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ರಾಷ್ಟ್ರ ರಾಜಧಾನಿಗೆ ಆಗಮಿಸುವ ಎಲ್ಲ ವ್ಯಕ್ತಿಗಳಿಗೆ ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕೊರೊನಾ ವೈರಸ್‌ನ ರೂಪಾಂತರದ ವರದಿಗಳಲ್ಲಿ ಹೆಚ್ಚಳ ಕಂಡುಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಕಡಿಮೆ ಕಾಲಾವಧಿ ಮತ್ತು ಹೆಚ್ಚಿನ ಪ್ರಸರಣ ಪ್ರಮಾಣವನ್ನು ಹೊಂದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಲಸಿಕೆ ಖಾಲಿ, ಆಮ್ಲಜನಕ ಸಿಲಿಂಡರ್ ಒದಗಿಸಿ: ಸರ್ಕಾರಕ್ಕೆ ಫನಾ ಪತ್ರ
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ವಿಮಾನಯಾನ ಸಂಸ್ಥೆಗಳು, ರೈಲ್ವೆ, ಬಸ್, ಕಾರು, ಟ್ರಕ್‌ಗಳು ಅಥವಾ ಇನ್ನಾವುದೇ ಸಾರಿಗೆ ವಿಧಾನದಿಂದ ಬರುವ ಎಲ್ಲಾ ಪ್ರಯಾಣಿಕರು ಸಂಬಂಧಪಟ್ಟ ಜಿಲ್ಲಾಧಿಕಾರಿಯಿಂದ ಗುರುತಿಸಲ್ಪಟ್ಟ ಸ್ಥಳದಲ್ಲಿ 14 ದಿನಗಳವರೆಗೆ ಕ್ವಾರಂಟೈನ್ಗೆ ಒಳಗಾಗಬೇಕಿದೆ.