ನವದೆಹಲಿ: ಈಶಾನ್ಯ ದೆಹಲಿಯ ಸೀಲಂಪುರ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. 50 ವರ್ಷದ ವ್ಯಕ್ತಿಯೊಬ್ಬರ ಮೃತದೇಹ ಅವರ ಮನೆಯ ಫ್ರಿಡ್ಜ್ನಲ್ಲಿ ಶುಕ್ರವಾರ ರಾತ್ರಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾಕೀರ್ ಎಂಬುವರು ಮೃತ ವ್ಯಕ್ತಿ.
ಈತ ಪತ್ನಿ ಹಾಗೂ ಮಕ್ಕಳಿಂದ ದೂರವಾಗಿ ಒಬ್ಬಂಟಿಯಾಗಿ ವಾಸವಿದ್ದರು. ಶುಕ್ರವಾರ ರಾತ್ರಿ 7.15 ರ ಸುಮಾರಿಗೆ ಸಂಬಂಧಿಯೊಬ್ಬರು ಕರೆ ಮಾಡಿದ್ದು, ಜಾಕೀರ್ ಫೋನ್ ರಿಸೀವ್ ಮಾಡಿರಲಿಲ್ಲವಂತೆ. ಇದರಿಂದ ಅನುಮಾನಗೊಂಡ ಮಹಿಳೆ ಸ್ಥಳಕ್ಕೆ ಬಂದು ನೋಡಿದಾಗ ಮೃತದೇಹ ಕಂಡುಬಂದಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.