ಕರ್ನಾಟಕ

karnataka

ETV Bharat / bharat

ಬಾಲಕಿ ಮೇಲೆ ಅತ್ಯಾಚಾರವೆಸಗಿ ಆ್ಯಸಿಡ್ ದಾಳಿಗೆ ಯತ್ನ: ಆರೋಪಿ ಬಂಧನ, ಪತ್ನಿ ಪರಾರಿ - ದೆಹಲಿಯಲ್ಲಿ ಬಾಲಕಿ ಮೇಲೆ ಆ್ಯಾಸಿಡ್​ ಹಾಕಲು ಯತ್ನ

ಶೂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಜುಲೈ 2 ರಂದು ಸಂತ್ರಸ್ತೆಗೆ ಆಮಿಷವೊಡ್ಡಿ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ಅತನ ಪತ್ನಿಯ ಸಹಾಯದಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ದೆಹಲಿಯಲ್ಲಿ ಬಾಲಕಿ ಮೇಲೆ ಆ್ಯಾಸಿಡ್​ ಹಾಕಲು ಯತ್ನ
ದೆಹಲಿಯಲ್ಲಿ ಬಾಲಕಿ ಮೇಲೆ ಆ್ಯಾಸಿಡ್​ ಹಾಕಲು ಯತ್ನ

By

Published : Jul 17, 2022, 9:59 PM IST

ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಹಾಗೆ ಈಗ ಆರೋಪಿ ಬಾಲಕಿ ಬಾಯಿಗೆ ಆ್ಯಸಿಡ್​ ಹಾಕಲು ಮುಂದಾಗಿದ್ದಾನೆ. ಜುಲೈ 2 ರಂದು ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯನ್ನು ನವದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ. ಸದ್ಯ ಸಂತ್ರಸ್ತೆಯ ದೈಹಿಕ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಆರೋಪಿಯನ್ನು ಜೈ ಪ್ರಕಾಶ್ ಎಂದು ಗುರುತಿಸಲಾಗಿದ್ದು, ಈ ಪ್ರದೇಶದಲ್ಲಿ ಶೂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಜುಲೈ 2 ರಂದು ಸಂತ್ರಸ್ತೆಗೆ ಆಮಿಷವೊಡ್ಡಿ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ಅತನ ಪತ್ನಿಯ ಸಹಾಯದಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನಂತೆ. ಈ ಬಗ್ಗೆ ಡಿಸಿಪಿ ಸಮೀರ್ ಶರ್ಮಾ ಮಾಹಿತಿ ನೀಡಿದ್ದಾರೆ.

ಜುಲೈ 2 ರಂದು ಅತ್ಯಾಚಾರ ನಡೆದಿದ್ದು, ಜುಲೈ 5 ರಂದು ಸಂತ್ರಸ್ತೆಯ ಬಾಯಿಗೆ ಆ್ಯಸಿಡ್​ ಹಾಕಲು ಆರೋಪಿ ಮುಂದಾಗಿದ್ದಾನೆ. ಘಟನೆ ಸಂಬಂಧ ಜೈ ಪ್ರಕಾಶ್​ನನ್ನು ಬಂಧಿಸಲಾಗಿದ್ದು, ಆತನ ಪತ್ನಿ ತಲೆಮರೆಸಿಕೊಂಡಿದ್ದಾಳೆ.

ಜುಲೈ 15 ರಂದು ಸಂತ್ರಸ್ತೆಯ ಸಹೋದರ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕ್ರೈಂ ಧಾರಾವಾಹಿಯಿಂದ ಪ್ರೇರಣೆ: ಬಾಲಕನ ಕಿಡ್ನಾಪ್​ ಮಾಡಿ ಕೊಲೆಗೈದ 10ನೇ ಕ್ಲಾಸ್​ ವಿದ್ಯಾರ್ಥಿಗಳು!

For All Latest Updates

TAGGED:

ABOUT THE AUTHOR

...view details