ನವದೆಹಲಿ:ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಬುಧವಾರ ರಾತ್ರಿ ನಡೆದ ಬರ್ತ್ಡೇ ಪಾರ್ಟಿಯೊಂದರಲ್ಲಿ ಗುಂಪೊಂದು ವ್ಯಕ್ತಿಯೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.
ಬರ್ತ್ಡೇ ಪಾರ್ಟಿ ವೇಳೆ ಚಾಕು ಇರಿತ ಪ್ರಕರಣ: ನಾಲ್ವರ ಬಂಧನ - ವ್ಯಕ್ತಿಗೆ ಚಾಕುವಿನಿಂದ ಇರಿತ
ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಬುಧವಾರ ರಾತ್ರಿ ಬರ್ತ್ಡೇ ಪಾರ್ಟಿ ವೇಳೆ ಗುಂಪುಘರ್ಷಣೆ ನಡೆದು ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ರಿಂಕು ಶರ್ಮಾ ಎಂಬ ಯುವಕನಿಗೆ ಚಾಕುವಿನಿಂದ ಇರಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಚಾಕು ಇರಿತಕ್ಕೆ ಸಂಬಂಧಿಸಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತ ಆರೋಪಿಗಳನ್ನು ವಿಚಾರಣೆ ಒಳಪಡಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ ರೆಸ್ಟೊರೆಂಟ್ನಲ್ಲಿ ಬರ್ತ್ ಡೇ ಪಾರ್ಟಿ ಆಯೋಜಿಸಲಾಗಿದ್ದು, ಈ ಸಮಯದಲ್ಲಿ ರೆಸ್ಟೋರೆಂಟ್ ಕ್ಲೋಸ್ ಮಾಡುವ ವಿಚಾರಕ್ಕೆ ಗಲಾಟೆ ನಡೆದು ವ್ಯಕ್ತಿಯೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಇನ್ನು ಆರೋಪಿಗಳು ಹಾಗೂ ಸಂತ್ರಸ್ತ ಎಲ್ಲರೂ ಒಂದೇ ಏರಿಯಾದವರೆಂದು ತಿಳಿದು ಬಂದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.