ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿಅಪ್ರಾಪ್ತೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹಾಗೂ ಆಕೆಯ ಕುಟುಂಬದ ಫೋಟೋವನ್ನು ಪೋಸ್ಟ್ ಮಾಡಿದ ಕಾರಣಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.
ದೆಹಲಿಯ ವಕೀಲ ವಿನೀತ್ ಜಿಂದಾಲ್ ದೂರು ದಾಖಲಿಸಿದ್ದು, ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ 9 ವರ್ಷದ ಬಾಲಕಿ ಮತ್ತು ಆಕೆಯ ಕುಟುಂಬದ ಫೋಟೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬುಧವಾರವಷ್ಟೇ ಬಾಲಕಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂತ್ರಸ್ತೆಯ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ನಂತರ ಘಟನೆಯ ಕುರಿತು ಟ್ವೀಟ್ ಮಾಡಿದ್ದು, ಆಕೆ ದೇಶದ ಮಗಳು. ಈ ದೇಶದ ಮಗಳು ನ್ಯಾಯಕ್ಕೆ ಅರ್ಹಳು. ನಾನು ನ್ಯಾಯದ ಹಾದಿಯಲ್ಲಿ ಅವರೊಂದಿಗೆ ಇದ್ದೇನೆ ಎಂದಿದ್ದರು.