ನವದೆಹಲಿ:ಕಳೆದ ಕೆಲ ದಿನಗಳಿಂದ ಗಂಡ-ಹೆಂಡತಿ ನಡುವೆ ಪದೇ ಪದೇ ಜಗಳ ನಡೆಯುತ್ತಿದ್ದು, ಮೂರು ತಿಂಗಳ ಕಂದಮ್ಮವೊಂದು ಬಲಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಹೈದರ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಕಳೆದ ಕೆಲ ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಗಂಡ-ಹೆಂಡತಿ ಮೂರು ತಿಂಗಳ ಹಿಂದೆ ಮುಂದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಮೇಲಿಂದ ಮೇಲೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಗ್ತಿತ್ತು. ಗುರುವಾರ ಸಹ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಪತಿ ಸಂಚಿತ್ ಕೆಲಸಕ್ಕೆಂದು ಹೊರಗಡೆ ಹೋಗಿದ್ದಾನೆ. ಇದೇ ಸಂದರ್ಭದಲ್ಲಿ ಪತ್ನಿ ತನ್ನ ಮೂರು ತಿಂಗಳ ಮಗುವಿನ ಕೊಲೆ ಮಾಡಿದ್ದಾಳೆ.