ನವದೆಹಲಿ: ಏಷ್ಯಾದ 10 ಅತಿಹೆಚ್ಚು ಮಾಲಿನ್ಯಗೊಂಡ ನಗರಗಳ ಪೈಕಿ ಎಂಟು ಭಾರತದ ನಗರಗಳಾಗಿದ್ದು, ರಾಜಧಾನಿ ದೆಹಲಿ ಈ ಪಟ್ಟಿಯಲ್ಲಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ. ಮಾಧ್ಯಮ ವರದಿಯನ್ನು ಉಲ್ಲೇಖಿಸಿದ ಅವರು, ರಾಜಧಾನಿಯು ಮಾಲಿನ್ಯದ ವಿರುದ್ಧದ ಹೋರಾಟದಲ್ಲಿ ಇನ್ನೂ ಗೆದ್ದಿಲ್ಲವಾದರೂ, ದೆಹಲಿಯನ್ನು ವಿಶ್ವದ ಅತ್ಯಂತ ಕಲುಷಿತ ನಗರವೆಂದು ಪರಿಗಣಿಸದಿರುವುದು ಆಶಾದಾಯಕವಾಗಿದೆ ಎಂದು ಹೇಳಿದರು.
ಕೆಲ ವರ್ಷಗಳ ಹಿಂದೆ ದೆಹಲಿಯನ್ನು ವಿಶ್ವದ ಅತ್ಯಂತ ಕಲುಷಿತ ನಗರ ಎಂದು ಪರಿಗಣಿಸಲಾಗಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸಿದೆ ಎಂದು ಅವರು ಹೇಳಿದ್ದಾರೆ. ಏಷ್ಯಾದ 10 ಅತ್ಯಂತ ಕಲುಷಿತ ನಗರಗಳಲ್ಲಿ, 8 ಭಾರತದ ನಗರಗಳಾಗಿವೆ ಮತ್ತು ದೆಹಲಿ ಈ ಪಟ್ಟಿಯಲ್ಲಿಲ್ಲ. ಕೆಲ ವರ್ಷಗಳ ಹಿಂದೆ ದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರವಾಗಿತ್ತು. ಇನ್ನು ಮುಂದೆ ಹಾಗಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.