ನವದೆಹಲಿ: ದೇಶಾದ್ಯಂತ ರೂಪಾಂತರಿ ಒಮಿಕ್ರಾನ್ ಜೊತೆಗೆ ಕೊರೊನಾ ವೈರಸ್ನ ಮೂರನೇ ಅಲೆ ಜೋರಾಗುತ್ತಿದೆ. ಅನೇಕ ರಾಜ್ಯಗಳು ಮುನ್ನೆಚ್ಚರಿಕೆ ಕ್ರಮವಾಗಿ ನೈಟ್ ಕರ್ಫ್ಯೂ ಸೇರಿದಂತೆ ವಿವಿಧ ರೀತಿಯ ನಿರ್ಬಂಧಗಳನ್ನು ಜಾರಿಗೆ ತರುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಮಾರ್ಗಸೂಚಿ ಜಾರಿಯಲ್ಲಿದ್ದು, ಇವುಗಳನ್ನು ಉಲ್ಲಂಘಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ.
ಜನವರಿ 2ರಂದು ದೆಹಲಿಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಕ್ಕಾಗಿ 5,066 ಪ್ರಕರಣಗಳಿಂದ 1,00,15,300 ರೂ. ದಂಡ ಸಂಗ್ರಹ ಮಾಡಲಾಗಿದೆ. ಜೊತೆಗೆ, 45 ಕೇಸ್ಗಳಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.