ನವದೆಹಲಿ:ಕುಸ್ತಿಪಟು ಸಾವಿಗೆ ಕಾರಣವಾದ ಆರೋಪದಲ್ಲಿ ಸಿಲುಕಿ ಪರಾರಿಯಾಗಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ಕುಮಾರ್ ಅವರ ಬಂಧನಕ್ಕೆ ದೆಹಲಿ ಪೊಲೀಸರು ಹರಸಾಹಸ ನಡೆಸುತ್ತಿದ್ದು, ಆತನ ಇರುವ ಸ್ಥಳದ ಬಗ್ಗೆ ನಿಖರ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಇಷ್ಟು ಮಾತ್ರವಲ್ಲದೇ ಸುಶೀಲ್ ಕುಮಾರ್ ಸ್ನೇಹಿತ ಅಜಯ್ ಕುಮಾರ್ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದು, ಆತನನ್ನು ಹಿಡಿದವರಿಗೆ ಅಥವಾ ಮಾಹಿತಿ ನೀಡಿದವರಿಗೆ 50 ಸಾವಿರ ರೂಪಾಯಿಗಳ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಹೆಲ್ಪ್ಲೈನ್ಗೆ ಅಶ್ಲೀಲ ವಿಡಿಯೋ, ಫೋಟೋ ಕಳಿಸಿದ್ದವನಿಗೆ ಪೊಲೀಸರ ಹುಡುಕಾಟ
ಕಳೆದ ವಾರ ದೆಹಲಿ ನ್ಯಾಯಾಲಯವು ಛತ್ರಸಾಲ್ ಕ್ರೀಡಾಂಗಣದ ಗದ್ದಲಕ್ಕೆ ಸಂಬಂಧಿಸಿದಂತೆ ಸುಶೀಲ್ ಕುಮಾರ್ ಮತ್ತು ಇತರ ಆರು ಜನರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈಗಾಗಲೇ ಕೆಲವರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಕಳೆದ ಎರಡು ವಾರಗಳಿಂದ ದೆಹಲಿ ಪೊಲೀಸರು 24 ವರ್ಷದ ಸಾಗರ್ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ರನ್ನು ಬಂಧಿಸಲು ಹುಡುಕುತ್ತಿದ್ದಾರೆ. ಅಲ್ಲದೇ ಪೊಲೀಸ್ ತಂಡ ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಈಗಾಗಲೇ ಶೋಧ ಕಾರ್ಯ ನಡೆಸಿದೆ.