ನವದೆಹಲಿ :ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಒದಗಿಸಿರುವ ಭದ್ರತೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ದೆಹಲಿ ಪೊಲೀಸ್ ಇಲಾಖೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಗುರುವಾರ ಮಾಹಿತಿ ನೀಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರಿಗೆ ಒದಗಿಸಿದ್ದ ಭದ್ರತಾ ಸಿಬ್ಬಂದಿಯಲ್ಲಿ ಯಾವುದೇ ಇಳಿಕೆ ಮಾಡಿಲ್ಲ. ಅವರಿಗೆ ಒದಗಿಸಿದ್ದ ಭದ್ರತೆಯನ್ನು ಕಡಿಮೆ ಮಾಡಿಲ್ಲ ಎಂದು ದೆಹಲಿ ಪೊಲೀಸ್ನ ಸಾರ್ವಜನಿಕ ಸಂಪರ್ಕಾಧಿಕಾರಿ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ಗೆ ಝಡ್ ಪ್ಲಸ್ ಭದ್ರತೆ ಒದಗಿಸಲಾಗಿದೆ. ಇದರಲ್ಲಿ ಪೈಲೆಟ್ ವಾಹನ, ಎಸ್ಕಾರ್ಟ್, ರಕ್ಷಣಾ ಸಿಬ್ಬಂದಿ, ಮನೆ ಭದ್ರತಾ ಸಿಬ್ಬಂದಿ ಸೇರಿ 16 ಸಮವಸ್ತ್ರಧಾರಿಗಳನ್ನು ಭದ್ರತೆಗೆ ಒದಗಿಸಲಾಗಿದೆ.