ನವದೆಹಲಿ: ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ರ‍್ಯಾಲಿ ವೇಳೆ ನಡೆದ ಹಿಂಸಾಚಾರದ ಬೆನ್ನಲ್ಲೇ ದೆಹಲಿ ಪೊಲೀಸರೀಗ ಖಲಿಸ್ತಾನ್ ಸಂಬಂಧಿತ ಟ್ವಿಟರ್ ಖಾತೆಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ಈಗಾಗಲೇ ಹಿಂಸಾಚಾರ ಕುರಿತು ದ್ವೇಷಪೂರಿತ ಮಾಹಿತಿ ಹಂಚಿಕೊಳ್ಳುತ್ತಿದ್ದ ಸುಮಾರು 550ಕ್ಕೂ ಹೆಚ್ಚು ಖಾತೆಗಳನ್ನು ಟ್ವಿಟರ್ ಸ್ಥಗಿತಗೊಳಿಸಿದೆ. ಈ ಸಂಬಂಧ ತನಿಖೆ ಕೈಗೊಂಡಿರುವ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಮಾಡಿರುವ ಇಂತಹ ಮತ್ತಷ್ಟು ಖಾತೆಗಳನ್ನು ಹುಡುಕುತ್ತಿದ್ದಾರೆ.
ಈ ಹಿಂಸಾತ್ಮಕ ರ‍್ಯಾಲಿ ಹಿಂದೆ ಖಲಿಸ್ತಾನಿ ಪ್ರತ್ಯೇಕತಾವಾದಿ ಹೋರಾಟಗಾರರ ಕೈವಾಡವೂ ಇದೆ ಎಂಬ ಆರೋಪಗಳು ಕೇಳಿಬಂದಿದ್ದು, ಖಲಿಸ್ತಾನ್ ಸಂಬಂಧಿತ ಟ್ವಿಟರ್ ಖಾತೆಗಳ ಮೇಲೆ ದೆಹಲಿ ಪೊಲೀಸರು ದೃಷ್ಟಿ ಹಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.