ಕರ್ನಾಟಕ

karnataka

ETV Bharat / bharat

ಪ್ರಿಯಾಂಕಾ ಗಾಂಧಿ ಮತ್ತಿತರ ಕಾಂಗ್ರೆಸ್​ ನಾಯಕರನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು - ರಾಷ್ಟ್ರಪತಿ ಭವನ

ರೈತರ ಪ್ರತಿಭಟನೆಯಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ರಾಷ್ಟ್ರಪತಿಗೆ ಸಲ್ಲಿಸಲು ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸಂಸದರೊಂದಿಗೆ ಮೆರವಣಿಗೆ ಹೊರಟಿದ್ದರು. ಆದರೆ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತಿತರ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Delhi Police take Priyanka Gandhi and other Congress leaders into custody
ಪ್ರಿಯಾಂಕಾ ಗಾಂಧಿ ಮತ್ತಿತರ ಕಾಂಗ್ರೆಸ್​ ನಾಯಕರನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು

By

Published : Dec 24, 2020, 12:08 PM IST

ನವದೆಹಲಿ:ರಾಷ್ಟ್ರಪತಿಗಳಿಗೆ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ಸಲ್ಲಿಸಲು ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ಪ್ರಿಯಾಂಕಾ ಗಾಂಧಿ ಮತ್ತಿತರ ಕಾಂಗ್ರೆಸ್​ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೈತರ ಪ್ರತಿಭಟನೆಯಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಲು ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸಂಸದರೊಂದಿಗೆ ಮೆರವಣಿಗೆ ಹೊರಟಿದ್ದರು. ಆದರೆ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ಪ್ರಿಯಾಂಕಾ ಗಾಂಧಿ ಮತ್ತಿತರ ಕಾಂಗ್ರೆಸ್​ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

"ರಾಹುಲ್ ಗಾಂಧಿ ಮತ್ತು ಪ್ರತಿಪಕ್ಷದ ನಾಯಕರು ರಾಷ್ಟ್ರಪತಿಗಳನ್ನು ಭೇಟಿಯಾಗಿ ರೈತರ ಸಮಸ್ಯೆಯನ್ನು ಬಗೆಹರಿಸಲು ಜ್ಞಾಪಕ ಪತ್ರವನ್ನು ಸಲ್ಲಿಸಿದರು. ಆದರೆ, ರಾಷ್ಟ್ರಪತಿಗಳಾಗಲಿ ಮತ್ತು ಸರ್ಕಾರವಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ರಾಹುಲ್ ಗಾಂಧಿ ಕಾಂಗ್ರೆಸ್ ಸಂಸದರೊಂದಿಗೆ ನಾಳೆ ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನದವರೆಗೆ ಪ್ರದರ್ಶನ ನಡೆಸಲಿದ್ದಾರೆ” ಎಂದು ಕಾಂಗ್ರೆಸ್ ಸಂಸದ ಕೆ. ಸುರೇಶ್ ಬುಧವಾರ ಮಾಧ್ಯಮವೊಂದಕ್ಕೆ ತಿಳಿಸಿದ್ದರು.

ಆನಂತರ ಅವರು ರಾಹುಲ್​ ಗಾಂಧಿ ಮತ್ತು ಇತರ ಹಿರಿಯ ನಾಯಕರು ರಾಷ್ಟ್ರಪತಿಯನ್ನು ಭೇಟಿ ಮಾಡಿ ರೈತರ ಹೋರಾಟವನ್ನು ಬಗೆಹರಿಸಲು ಅವರ ಹಸ್ತಕ್ಷೇಪಕ್ಕಾಗಿ 2 ಕೋಟಿ ಸಹಿಗಳನ್ನು ಒಳಗೊಂಡ ಜ್ಞಾಪಕ ಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಅವರು ಹೇಳಿದರು.

ಪ್ರತಿಭಟನೆಯನ್ನು ಕೊನೆಗೊಳಿಸುವ ಹಿನ್ನೆಲೆ ಕೇಂದ್ರ ಸರ್ಕಾರ ಹೊಸ ಸುತ್ತಿನ ಮಾತುಕತೆಗೆ ರೈತ ಮುಖಂಡರನ್ನು ಆಹ್ವಾನಿಸಿದೆ. ಸರ್ಕಾರ ಈವರೆಗೆ ರೈತರೊಂದಿಗೆ ಹಲವಾರು ಸುತ್ತಿನ ಮಾತುಕತೆ ನಡೆಸಿದೆ.

ಡಿಸೆಂಬರ್ 8 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೃಷಿ ಒಕ್ಕೂಟದ 13 ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದರು. ಆದರೆ, ಒಂದು ದಿನದ ನಂತರ ರೈತ ಮುಖಂಡರು ಕೇಂದ್ರ ಕಳುಹಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರು.

ABOUT THE AUTHOR

...view details