ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ 448 ಕೋವಿಡ್ ಸೋಂಕಿತರು ಮೃತಪಟ್ಟಿದ್ದು, ಹೊಸದಾಗಿ 18,043 ಪ್ರಕರಣಗಳು ದಾಖಲಾಗಿವೆ. ಕೋವಿಡ್ ಹಬ್ಬಲು ಶುರುವಾದ ಬಳಿಕ ಇದೇ ಮೊದಲ ಬಾರಿಗೆ ಗರಿಷ್ಠ ಸಾವು ಸಂಭವಿಸಿದೆ.
ಸರ್ಕಾರದ ಮಾಹಿತಿ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಸದ್ಯ 89,592 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 12.12 ಲಕ್ಷ ಆಗಿದೆ. ಕಳೆದ 24 ಗಂಟೆಯಲ್ಲಿ 51,185 ಆರ್ಟಿಪಿಸಿಆರ್, ಸಿಬಿಎನ್ಎಟಿ, ಟ್ರೂ ನ್ಯಾಟ್ ಪರೀಕ್ಷೆಗಳು ಮತ್ತು 9,860 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗಿದೆ. ಸದ್ಯ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ. 29.56 ಇದೆ.