ನವದೆಹಲಿ: ಪೌರತ್ವ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಉದ್ದೇಶಪೂರ್ವಕವಾಗಿ ನಡೆಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಯತ್ನಿಸಿ ಬಂಧಿತನಾಗಿರುವ ಆರೋಪಿ ಶಾರುಖ್ ಪಠಾಣ್ ಮೇ 23 ರಂದು 4 ಗಂಟೆಗಳ ಪೆರೋಲ್ ಮೇಲೆ ತನ್ನ ನಿವಾಸಕ್ಕೆ ಆಗಮಿಸಿದ್ದ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಸಿಎಎ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ದಂಗೆಗೆ ಪ್ರಚೋದನೆ ನೀಡಿದ ಅನೇಕರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ವೇಳೆ ಪಿಸ್ತೂಲ್ ಹಿಡಿದು, ಪೊಲೀಸ್ ಅಧಿಕಾರಿ ದೀಪಕ್ ದಹಿಯಾ ಮೇಲೆ ಗುಂಡು ಹಾರಿಸಲು ಯತ್ನಿಸಿದ ಆರೋಪಿ ಶಾರುಖ್ ಪಠಾಣ್, ತನಗೆ ಜಾಮೀನು ನೀಡುವಂತೆ ಈ ಹಿಂದೆ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದ. 'ನನ್ನ 65 ವರ್ಷದ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅವರನ್ನು ನೋಡಿಕೊಳ್ಳಲು, ತಂದೆಯ ಆರೈಕೆ ಮಾಡಲು ಯಾರೂ ಇಲ್ಲ. ಹೀಗಾಗಿ ಮಾನವೀಯತೆ ಆಧಾರದಲ್ಲಿ ಜಾಮೀನು ನೀಡಬೇಕು' ಮನವಿ ಮಾಡಿದ್ದ. ಆದರೆ ಕೋರ್ಟ್ ಈತನ ಮನವಿಯನ್ನು ತಿರಸ್ಕರಿಸಿತ್ತು.