ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ರೆಸ್ಟ್ಲಿಂಗ್ ಫೆಡರೇಶನ್‌ನ ಮಾಜಿ ಕಾರ್ಯದರ್ಶಿ ವಿನೋದ್ ತೋಮರ್‌ಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಗುರುವಾರ ನ್ಯಾಯಾಲಯ ಅವರಿಗೆ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಇದಕ್ಕೂ ಮೊದಲು, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಸಾಮಾನ್ಯ ಜಾಮೀನು ಅರ್ಜಿಯ ಆದೇಶವನ್ನು ರೂಸ್ ಅವೆನ್ಯೂ ನ್ಯಾಯಾಲಯವು ಸಂಜೆ 4 ಗಂಟೆಗೆ ಕಾಯ್ದಿರಿಸಿತ್ತು.
ಜಾಮೀನು ಅರ್ಜಿಯನ್ನು ವಿರೋಧಿಸದ ದೆಹಲಿ ಪೊಲೀಸರು:ಈ ವಿಚಾರದಲ್ಲಿ ದೆಹಲಿ ಪೊಲೀಸರ ನಿಲುವು ಗೊಂದಲಮಯವಾಗಿತ್ತು. ನ್ಯಾಯಾಲಯದಲ್ಲಿ, ದೆಹಲಿ ಪೊಲೀಸರ ಪರ ವಕೀಲರು ಅವರು ಜಾಮೀನು ಅರ್ಜಿಯನ್ನು ವಿರೋಧಿಸುವುದಿಲ್ಲ ಅಥವಾ ಬೆಂಬಲಿಸುವುದಿಲ್ಲ ಎಂದು ಹೇಳಿದರು. ಈ ವಿಚಾರದಲ್ಲಿ ನ್ಯಾಯಾಲಯ ಕಾನೂನು ಪ್ರಕಾರ ತೀರ್ಮಾನ ಕೈಗೊಳ್ಳಬೇಕು ಎಂದು ವಿನಂತಿಸಿದ್ದರು.
ಮೊನ್ನೆ ಮಂಗಳವಾರ ಅಂದರೆ ಜುಲೈ 18 ರಂದು ಕುಸ್ತಿಪಟುಗಳ ಲೈಂಗಿಕ ಶೋಷಣೆ ಪ್ರಕರಣದಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ರಿಲೀಫ್ ಪಡೆದುಕೊಂಡಿದ್ದರು. ಈ ಪ್ರಕರಣದಲ್ಲಿ ಬ್ರಿಜ್ ಭೂಷಣ್ ಮತ್ತು ಅವರ ಸಹ ಆರೋಪಿ ವಿನೋದ್ ತೋಮರ್‌ಗೆ ರೋಸ್ ಅವೆನ್ಯೂ ಕೋರ್ಟ್ ಮಂಗಳವಾರ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ವೇಳೆ, ಭಾರಿ ಪೊಲೀಸ್ ಭದ್ರತೆಯ ನಡುವೆ ಬ್ರಿಜ್ ಭೂಷಣ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಕಳೆದ ವಿಚಾರಣೆಯ ಸಂದರ್ಭದಲ್ಲಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಪ್ರಕರಣದ ಮುಂದಿನ ವಿಚಾರಣೆ ಸಮಯದಲ್ಲಿ ಸಾಮಾನ್ಯ ಜಾಮೀನು ಅರ್ಜಿ ವಿಚಾರಣೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಆರೋಪಿಗಳ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್‌ಶೀಟ್ ಪರಿಗಣಿಸಿದ ನ್ಯಾಯಾಲಯವು ಜುಲೈ 7 ರಂದು ಸಮನ್ಸ್ ಜಾರಿಗೊಳಿಸಿ ಹಾಜರಾಗುವಂತೆ ಆದೇಶಿಸಿತು.