ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. ದಕ್ಷಿಣ ಜಿಲ್ಲೆಯ ಇಂಡಿಯನ್ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಸೋಮವಾರ ದೆಹಲಿ ಪೊಲೀಸರಿಗೆ ದುಷ್ಕರ್ಮಿಗಳು ಇ-ಮೇಲ್ ಕಳುಹಿಸಿದ್ದಾರೆ. ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬೆದರಿಕೆ ಕೇಳಿ ಬಂದ ತಕ್ಷಣವೇ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಸಮೇತ ಸ್ಥಳಕ್ಕೆ ದೌಡಾಯಿಸಿದ್ದಾರೆ.
ದೆಹಲಿ ಶಾಲೆಗೆ ಬಾಂಬ್ ಬೆದರಿಕೆ.. ಇಮೇಲ್ ಮೂಲಕ ಪೊಲೀಸರಿಗೆ ದುಷ್ಕರ್ಮಿಗಳಿಂದ ಮಾಹಿತಿ - ದೆಹಲಿಯಲ್ಲಿ ಬಾಂಬ್ ಬೆದರಿಕೆ
ದೆಹಲಿಯ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಪೊಲೀಸರಿಗೆ ಮಿಂಚಂಚೆ ಕಳುಹಿಸಿ ಬೆದರಿಕೆ ಹಾಕಿದ್ದು, ಬಾಂಬ್ ನಿಷ್ಕ್ರಿಯ ದಳ ಸ್ಥಳ ಪರಿಶೀಲನೆ ನಡೆಸುತ್ತಿದೆ.

ದೆಹಲಿ ಶಾಲೆಗೆ ಬಾಂಬ್ ಬೆದರಿಕೆ