ಕರ್ನಾಟಕ

karnataka

ETV Bharat / bharat

ಕುಟುಂಬಸ್ಥರೊಂದಿಗೆ ಮದುವೆಗೆ ತೆರಳಿದ್ದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್​ - ಶಾದಿಪುರ ಸಮುದಾಯ ಕೇಂದ್ರ

6 ವರ್ಷದ ಬಾಲಕಿ ಮೇಲೆ ಕಾಮುಕನೋರ್ವ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ರಂಜಿತ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

police
ಪೊಲೀಸ್​

By

Published : Dec 22, 2021, 11:15 AM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕುಟುಂಬಸ್ಥರ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳಿದ್ದ ಆರು ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿ ಅಟ್ಟಹಾಸ ಮೆರದಿದ್ದಾನೆ.

ರಂಜಿತ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶಾದಿಪುರ ಸಮುದಾಯ ಕೇಂದ್ರದಲ್ಲಿ ಸೋಮವಾರ ನಡೆದ ವಿವಾಹ ಸಮಾರಂಭಕ್ಕೆ ಕುಟುಂಬಸ್ಥರ ಜೊತೆ ಅಪ್ರಾಪ್ತ ಬಾಲಕಿ ಆಗಮಿಸಿದ್ದಳು. ಆ ವೇಳೆ ಆಟವಾಡುತ್ತಾ ಸಮುದಾಯ ಕೇಂದ್ರದ ಹೊರಗೆ ಬಂದ ಬಾಲಕಿಯನ್ನು ವ್ಯಕ್ತಿಯೊಬ್ಬ ಆಮಿಷವೊಡ್ಡಿ ಟೆರೇಸ್ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ಬಾಲಕಿ ಅಳುತ್ತಾ ಬಂದಾಗ ಘಟನೆ ಕುರಿತು ಮನೆಯವರಿಗೆ ತಿಳಿದಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸಂಬಂಧ ಬಾಲಕಿಯ ತಂದೆ ನೀಡಿದ ಹೇಳಿಕೆ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕಾಮುಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ABOUT THE AUTHOR

...view details