ನವದೆಹಲಿ:ಭಾರತದಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯ ಆವರಣದೊಳಗಿನ ಕಾಮಗಾರಿ ಸ್ಥಳದಲ್ಲಿ ಅವಘಡವೊಂದು ಸಂಭವಿಸಿದ್ದು, ಈ ವೇಳೆ ಇಬ್ಬರು ಸಾವನ್ನಪ್ಪಿ, ಓರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ನಡೆದಿದೆ.
ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ದೆಹಲಿಯ ಚಾಣಕ್ಯಪುರಿ ಪೊಲೀಸ್ ಠಾಣೆಯ ಪೊಲೀಸ್ ಕಂಟ್ರೋಲ್ ರೂಮ್ಗೆ ಫೋನ್ ಕರೆಯೊಂದು ಬಂದಿದ್ದು, ಅಮೆರಿಕ ರಾಯಭಾರ ಕಚೇರಿಯ ಕಾಮಗಾರಿ ಸ್ಥಳದಲ್ಲಿ ಅವಘಡವೊಂದು ನಡೆದು ಮೂವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿತ್ತು.
ನಂತರ ಗಾಯಗೊಂಡವರಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲಾಗಿದೆ.
ಕಾಂಚನ್ ಮತ್ತು ಬಾಬುಲಾಲ್ ಎಂಬ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು, ಮುಕೇಶ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಮುಕೇಶ್ಗೆ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ರಾಜಸ್ಥಾನದ ದೌಸಾ ಪಟ್ಟಣಕ್ಕೆ ಸೇರಿದವರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ:ಅಬಕಾರಿ ಸುಂಕ ಕಡಿತ : ತಮಿಳುನಾಡಿನಲ್ಲಿ 100 ಗಡಿಯಿಂದ ಕೆಳಗಿಳಿದ ಪೆಟ್ರೋಲ್ ದರ