ನವದೆಹಲಿ:ಕೊರೊನಾ ವೈರಸ್ನ ಡೆಲ್ಟಾ ಪ್ಲಸ್ ರೂಪಾಂತರ ಪ್ರಕರಣಗಳು ಪತ್ತೆಯಾದ ಜಿಲ್ಲೆಗಳಲ್ಲಿ ಜನಸಂದಣಿಯನ್ನು ತಡೆಗಟ್ಟುವುದು, ಟೆಸ್ಟಿಂಗ್, ಟ್ರ್ಯಾಕಿಂಗ್ ಮತ್ತು ವ್ಯಾಕ್ಸಿನೇಷನ್ ಹೆಚ್ಚಿಸುವುದು ಸೇರಿದಂತೆ ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ತಮಿಳುನಾಡು, ರಾಜಸ್ಥಾನ, ಕರ್ನಾಟಕ, ಪಂಜಾಬ್, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಗುಜರಾತ್ ಮತ್ತು ಹರಿಯಾಣಕ್ಕೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಜನರ ಸ್ಯಾಂಪಲ್ಗಳನ್ನು ತಕ್ಷಣವೇ ಭಾರತೀಯ SARS-CoV-2 ಜೀನೋಮಿಕ್ ಕನ್ಸೋರ್ಟಿಯಾ (INSACOG)ದ ಗೊತ್ತುಪಡಿಸಿದ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಂತೆ ಕೇಳಲಾಗಿದೆ.