ರಾಯ್‌ಪುರ (ಛತ್ತೀಸ್‌ಗಢ): 2023ರ ಛತ್ತೀಸ್‌ಗಢ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದುತ್ವ ರಾಷ್ಟ್ರದ ಬೇಡಿಕೆ ತೀವ್ರಗೊಂಡು ಹೆಚ್ಚು ಧಾರ್ಮಿಕ ಸಭೆಗಳನ್ನು ನಡೆಸಲಾಗುತ್ತಿದೆ. ಇದನ್ನು (ಹಿಂದುತ್ವ ರಾಷ್ಟ್ರ) ಕೆಲವು ದಿನಗಳ ಹಿಂದೆ ನಡೆದ ಧಾರ್ಮಿಕ ಸಭೆಯಲ್ಲಿ ಸಾಧು-ಸಂತರು ಬಲವಾಗಿ ಪ್ರತಿಪಾದಿಸಿದ್ದರು. ಇದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಮುಂದಾಗಿದೆ. ಪ್ರತಿಪಕ್ಷ ಬಿಜೆಪಿಯು ಧರ್ಮ ಸಭೆಯ ಮೂಲಕ ಮತದಾರರನ್ನು ಓಲೈಸುತ್ತಿದೆ. ಆದರೆ ಚುನಾವಣೆಯಲ್ಲಿ ಧರ್ಮ ಚಕ್ರ ರಾಜಕಾರಣ ಮಾಡುವುದಿಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ಟೀಕಿಸಿದೆ.
ಒತ್ತಾಯದ ಮೇರೆಗೆ ಇಡೀ ಛತ್ತೀಸ್ಗಢದಲ್ಲಿ ಧಾರ್ಮಿಕ ಸಭೆಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಈ ಧಾರ್ಮಿಕ ಸಭೆಗಳಿಗೆ ಬಿಜೆಪಿ ಬೆಂಬಲ ನೀಡಿದೆ. ಛತ್ತೀಸ್‌ಗಢದ ಎಲ್ಲಾ ಜಿಲ್ಲೆಗಳಲ್ಲಿ ಧರ್ಮ ಸಭೆಗಳನ್ನು ಆಯೋಜಿಸಲಾಗಿದ್ದು, ಇದರಲ್ಲಿ ರಾಜ್ಯ ಸೇರಿದಂತೆ ದೇಶದ ಸಾಧುಗಳು ಮತ್ತು ಸಂತರು ಭಾಗವಹಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯ ಮೇಲೆ ಈ ಧರ್ಮ ಸಭೆಯ ರಾಜಕೀಯದ ಪ್ರಭಾವದ ಬಗ್ಗೆ ಊಹಾಪೋಹಗಳಿವೆ.
ಹಿಂದೂ ರಾಷ್ಟ್ರ ನಿರ್ಮಾಣ:ಹಿಂದುತ್ವ ರಾಷ್ಟ್ರದ ಬೇಡಿಕೆಯೊಂದಿಗೆ ರಾಜ್ಯದ 28 ಜಿಲ್ಲೆಗಳಲ್ಲಿ ಧರ್ಮ ಸಭೆ ನಡೆಯಲಿದೆ. ಕಳೆದ ಮಾರ್ಚ್‌ನಲ್ಲಿ ಛತ್ತೀಸ್‌ಗಢದ ರಾಯ್‌ಪುರದಲ್ಲಿ ಧಾರ್ಮಿಕ ಸಭೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ರಾಜ್ಯ ಸೇರಿದಂತೆ ದೇಶದ ಸಂತರು ಮತ್ತು ಋಷಿಮುನಿಗಳು ಭಾಗವಹಿಸಿದ್ದರು. ಈ ಸಮಯದಲ್ಲಿ ಎಲ್ಲರೂ ಒಕ್ಕೋರಲಿನಲ್ಲಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದರು. ಇಂತಹ ಕಾರ್ಯಕ್ರಮಗಳಲ್ಲಿ ಬಿಜೆಪಿ ನಿರಂತರವಾಗಿ ಪಾಲ್ಗೊಳ್ಳುತ್ತಿದೆ. ಛತ್ತೀಸ್‌ಗಢದ ಎಲ್ಲಾ ಜಿಲ್ಲೆಗಳಲ್ಲಿ ನಡೆಯಲಿರುವ ಸಭೆಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ ಸಂತರು ಮತ್ತು ಮುನಿಗಳು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ರಮಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು.