ಮುಂಬೈ(ಮಹಾರಾಷ್ಟ್ರ): ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ, ಛತ್ರಪತಿ ಶಿವಾಜಿ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗುತ್ತಿದೆ. ಮುಂಖ್ಯಮಂತ್ರಿ ಶಿಂದೆ ಗುಂಪಿನ ನಾಯಕರು ಮತ್ತು ಪ್ರತಿಪಕ್ಷಗಳು ಬಿಜೆಪಿಯನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿವೆ.
ಛತ್ರಪತಿ ಶಿವಾಜಿ ಮಹಾರಾಜ ಅವರನ್ನು ಟೀಕಿಸಿದ ರಾಜ್ಯಪಾಲರನ್ನು ವಜಾಗೊಳಿಸಬೇಕು ಎಂದು ಶಿಂದೆ ಬಣದ ಶಾಸಕರು ಹಾಗೂ ನಾಯಕರು ಒತ್ತಾಯಿಸುತ್ತಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಬಗ್ಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ನೀಡಿದ ವಿವಾದಾತ್ಮಕ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ.
ರಾಜ್ಯಪಾಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ರಾಜ್ಯಪಾಲರನ್ನು ಪದಚ್ಯುತಗೊಳಿಸಲು ಪ್ರತಿಪಕ್ಷಗಳು ಆಕ್ರಮಣಕಾರಿ ನಿಲುವನ್ನು ತೆಗೆದುಕೊಳ್ಳುತ್ತಿವೆ. ರಾಜ್ಯಪಾಲರ ಈ ಹೇಳಿಕೆ ತಪ್ಪು ಎಂಬ ಅಭಿಪ್ರಾಯವನ್ನು ಬಿಜೆಪಿಯ ಕೆಲವು ನಾಯಕರೂ ಆಂತರಿಕವಾಗಿ ವ್ಯಕ್ತಪಡಿಸಿದ್ದಾರೆ.
ಇಂದು ಬಿಜೆಪಿ ಸಂಸದ ಉದಯನರಾಜೆ ಭೋಸ್ಲೆ ಅವರು ರಾಯಗಡದಲ್ಲಿ ನಡೆದ ನಿರ್ಧರ್ ಶಿವ ಸನ್ಮಾನಚಾ ಕಾರ್ಯಕ್ರಮದಲ್ಲಿ ಮಾತನಾಡುವಾಗ ರಾಜ್ಯಪಾಲರ ವಿರುದ್ದ ಕಟುವಾದ ಮಾತುಗಳಲ್ಲಿ ಟೀಕಿಸಿದ್ದಾರೆ. ಅಲ್ಲದೇ ಬಿಜೆಪಿ ಹೆಸರು ಹೇಳದೇ ಪಕ್ಷದ ಕೆಲ ನಾಯಕರನ್ನ ಗುರಿಯಾಗಿಸಿಕೊಂಡು ಅವರು ವಾಗ್ದಾಳಿ ನಡೆಸಿದ್ದಾರೆ.