ಅಜ್ಮೀರ್ :ತಮ್ಮ ಮಗನ ಸಾವಿನ ಸುದ್ದಿ ಕೇಳಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವೈದ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ತಾಯಿ, ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದ ಮಗನ ಸಾವಿನ ಸುದ್ದಿ ಕೇಳಿ ಸೂಸೈಡ್ ಮಾಡಿಕೊಂಡಿದ್ದಾರೆ.
ಜೆಎಲ್‌ಎನ್ ಆಸ್ಪತ್ರೆಯ ಇಎನ್‌ಟಿ ಘಟಕದಲ್ಲಿ ಅಕ್ಷಯ್ ಕುಮಾರ್ ಅಂಕರೆ ವಿದ್ಯಾಭ್ಯಾಸ ಮಾಡುತ್ತಿದ್ದರು. ಅಂಕರೆ ವರ್ಷವಿಡೀ ಕೊರೊನಾ ರೋಗಿಗಳು ಹಾಗೂ ಫಂಗಸ್ ರೋಗಿಗಳಿಗೆ ಚಿಕಿತ್ಸೆ ನೀಡಿದ್ದರು. ಇದ್ದಕ್ಕಿದ್ದಂತೆ ಇಂಜೆಕ್ಷನ್ ಪಡೆದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.