ಚಂಡೀಗಢ: ಸುನಾರಿಯಾ ಜೈಲಿನಲ್ಲಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರು ಹೊಟ್ಟೆ ನೋವು, ಬಿಪಿಯಿಂದ ಬಳಲುತ್ತಿದ್ದು, ರೋಹತಕ್ನ ಪಿಜಿಐಎಂಎಸ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಭಾರಿ ಪೊಲೀಸ್ ಬೆಂಗಾವಲಿನಲ್ಲಿ ಗುರ್ಮಿತ್ ರನ್ನು ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆತರಲಾಯಿತು. ವೈದ್ಯಕೀಯ ಪರೀಕ್ಷೆಯ ಬಳಿಕ ಜೈಲಿಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.