ನವದೆಹಲಿ:ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ ಭಾರತದಂತಹ ನೆರೆಯ ರಾಷ್ಟ್ರಗಳ ಮೇಲೆ ಹೆಚ್ಚಿನ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದರು.
ಆ ದೇಶದಲ್ಲಿನ ಅಸ್ಥಿರತೆ ಇದೇ ರೀತಿಯಾಗಿ ಮುಂದುವರೆದರೆ ವಿಶ್ವದಾದ್ಯಂತ ಭಯೋತ್ಪಾದನೆ ಮತ್ತು ಉಗ್ರವಾದ ಸಿದ್ಧಾಂತಗಳಿಗೆ ಪ್ರೋತ್ಸಾಹ ಸಿಗಲಿದೆ ಎಂದು ಅವರು ಹೇಳಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಎಸ್ಒಸಿ ವಾರ್ಷಿಕ ಶೃಂಗಸಭೆಯಲ್ಲಿ ಭಾಗಿಯಾಗಿ ಮಾತನಾಡಿರುವ ಪ್ರಧಾನಿ, ಅಫ್ಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆ ನಡೆಯಲು ಶಾಂತಿ, ಭದ್ರತೆ ಹಾಗೂ ವಿಶ್ವಾಸದ ಕೊರತೆ ಮುಖ್ಯವಾಗಿದ್ದು, ಇದಕ್ಕೆ ಮುಖ್ಯ ಕಾರಣವೇ ಉಗ್ರವಾದ ಎಂದಿದ್ದಾರೆ. ಅಫ್ಘಾನಿಸ್ತಾನದಲ್ಲಿ ಆರ್ಥಿಕ ಸಂಕಷ್ಟ ಹಾಗೂ ವ್ಯಾಪಾರದ ಹರಿವಿನಲ್ಲಿ ಅಡಚಣೆಯಿಂದಾಗಿ ಹೆಚ್ಚಿನ ತೊಂದರೆಯಾಗುತ್ತಿದ್ದು, ಡ್ರಗ್ಸ್, ಅಕ್ರಮ ಶಸ್ತ್ರಾಸ್ತ್ರ ಹಾಗೂ ಮಾನವ ಕಳ್ಳಸಾಗಾಣಿಕೆಗೆ ಕಾರಣವಾಗಬಹುದು ಎಂದು ತಿಳಿಸಿದರು.