ಮುಂಬೈ:ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಧ್ವನಿ ಎತ್ತದ ಅಮಿತಾಬ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ಅವರ ಯಾವುದೇ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಂಪಿಸಿಸಿ ಅಧ್ಯಕ್ಷ ನಾನಾ ಪಟೋಲೆ ಹೇಳಿಕೆಗೆ ದೇವೇಂದ್ರ ಫಡ್ನವಿಸ್ ತಿರುಗೇಟು ನೀಡಿದ್ದಾರೆ.
ಇತ್ತೀಚೆಗಷ್ಟೇ ಎಂಪಿಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸಿರುವ ನಾನಾ ಪಟೋಲೆ, ನಟರ ಬಗ್ಗೆ ಮಾತನಾಡಿದ ಕೂಡಲೇ ಹೆಸರು ಮಾಡಬಹುದು ಎಂದುಕೊಂಡಿದ್ದಾರೆ. ಚಿತ್ರೀಕರಣ ನಿಲ್ಲಿಸಲು ಹೇಗೆ ಸಾಧ್ಯ..? ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಕಾನೂನು ಎಂಬುದು ಇನ್ನೂ ಇದೆ ಎಂದಿದ್ದಾರೆ.