ಪಟ್ಟನಂತಿಟ್ಟ(ಕೇರಳ):ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸೇರಿದ್ದ ಸಾವಿರಾರು ಭಕ್ತರು ಮಕರ ಜ್ಯೋತಿ ದರ್ಶನ ಪಡೆದುಕೊಂಡಿದ್ದಾರೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ದೇಶದ ನಾನಾ ರಾಜ್ಯಗಳಿಂದ ಆಗಮಿಸಿದ್ದ ಅಯ್ಯಪ್ಪ ಸ್ವಾಮಿ ಭಕ್ತರು ದೇವಸ್ಥಾನದ ಸುತ್ತಮುತ್ತಲೂ ನೆರೆದಿದ್ದರು.
ನೋಡಿ: ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ ಪಡೆದು ಪುನೀತರಾದ ಭಕ್ತರು - ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ
ಕೇರಳದ ಪೊನ್ನಂಬಲಮೇಡು ಬೆಟ್ಟದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿ ಕಣ್ತುಂಬಿಕೊಂಡರು. ಜ್ಯೋತಿ ಕಾಣಿಸುತ್ತಿದ್ದಂತೆ ದೇಗುಲದ ಸುತ್ತೆಲ್ಲಾ ಜೈಕಾರ ಮುಗಿಲುಮುಟ್ಟಿತ್ತು.
Makara jyothi from sabarimala temple in kerala
ಜ್ಯೋತಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ್ದು, ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಜೈಕಾರ ಮೊಳಗಿಸಿದರು. ಕೋವಿಡ್ ಮೂರನೇ ಅಲೆಯ ನಡುವೆ ಅನೇಕ ಕಠಿಣ ಮಾರ್ಗಸೂಚಿಗಳೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಭಕ್ತರಿಗೆ ಅವಕಾಶ ನೀಡಲಾಗಿತ್ತು. ಹೀಗಾಗಿ ಈ ಬಾರಿ ಭಕ್ತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ.
ಇದನ್ನೂ ಓದಿರಿ:ದಿಢೀರ್ ಹವಾಮಾನ ವೈಪರೀತ್ಯವೇ ಸೇನಾ ಹೆಲಿಕಾಪ್ಟರ್ ಪತನಕ್ಕೆ ಕಾರಣ: ತನಿಖಾ ವರದಿ ಸಲ್ಲಿಕೆ