ಚೆನ್ನೈ(ತಮಿಳುನಾಡು): ಐಪಿಎಲ್ ಬೆಟ್ಟಿಂಗ್ ಪ್ರಕರಣದ ತನಿಖೆ ನಡೆಸಿದ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ವಿರುದ್ಧ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮದ್ರಾಸ್ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಐಪಿಎಲ್ ಬೆಟ್ಟಿಂಗ್ ತನಿಖೆ ನಡೆಸಿದ ಐಪಿಎಸ್ ಅಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಧೋನಿ - IPL Spot Fixing
ಐಪಿಎಲ್ ಬೆಟ್ಟಿಂಗ್ ಪ್ರಕರಣದ ತನಿಖೆ ನಡೆಸಿದ ಐಪಿಎಸ್ ಅಧಿಕಾರಿ ಜಿ. ಸಂಪತ್ಕುಮಾರ್ ವಿರುದ್ಧ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮದ್ರಾಸ್ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ
2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣಗಳ ತನಿಖೆಯಲ್ಲಿ ಸಂಪತ್ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕೂ ಮುನ್ನ ಡಾನ್ ದಾವೂದ್ ಇಬ್ರಾಹಿಂ ಭಾಗಿಯಾಗಿದ್ದಾನೆ ಎನ್ನಲಾದ ಅಂತರರಾಷ್ಟ್ರೀಯ ಹಣ ವರ್ಗಾವಣೆ ಪ್ರಕರಣವನ್ನು ಕೂಡ ಇವರು ಭೇದಿಸಿದ್ದರು.