ಮುಂಬೈ:ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಮುಂದೆ ನಿಲ್ಲಿಸಿದ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಜೈಷ್-ಉಲ್- ಹಿಂದ್ ಪ್ರತಿಕ್ರಿಯೆ ನೀಡಿದ್ದು ತಮಗೂ, ಜಿಲೆಟಿನ್ ಕಡ್ಡಿಗಳು ಪತ್ತೆಯಾದ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಕೆಲವು ದಿನಗಳ ಹಿಂದೆ ಟೆಲಿಗ್ರಾಮ್ನಲ್ಲಿ ಜೈಷ್ ಉಲ್ ಹಿಂದ್ ಸಂಘಟನೆಯದ್ದು ಎಂದು ಹೇಳಿಕೊಳ್ಳಲಾದ ಪೋಸ್ಟ್ ವೈರಲ್ ಆಗಿದ್ದು, ಈ ಪೋಸ್ಟ್ನಲ್ಲಿ ಮುಕೇಶ್ ಅಂಬಾನಿಯನ್ನು ಬೆದರಿಸಿ, ಹಣಕ್ಕೆ ಬೇಡಿಕೆ ಇಡಲು ಕಾರಿನಲ್ಲಿ ಜಿಲೆಟಿನ್ ಕಡ್ಡಿ ಇಟ್ಟಿರುವಾಗಿ ಉಲ್ಲೇಖಿಸಲಾಗಿತ್ತು.
ಈ ಪೋಸ್ಟ್ಗೆ ಪ್ರತಿಕ್ರಿಯೆ ನೀಡಿರುವ ಜೈಷ್ ಉಲ್ ಹಿಂದ್, ಘಟನೆಗೂ, ನಮಗೂ ಯಾವುದೇ ಸಂಬಂಧವಿಲ್ಲ. ನಾವು ಮುಕೇಶ್ ಅಂಬಾನಿಗೆ ಯಾವುದೇ ಬೆದರಿಕೆ ಒಡ್ಡಿಲ್ಲ ಎಂದು ಮಾಹಿತಿ ನೀಡಿದೆ.