ಕರ್ನಾಟಕ

karnataka

ETV Bharat / bharat

ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಇಂಧನ ದರ ಹೀಗಿದೆ.. - ಇಂದಿನ ಡಿಸೇಲ್​ ದರ

ದೇಶ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ..

petrol price today  Diesel price today  Fuel price today  ಇಂದಿನ ಪೆಟ್ರೋಲ್ ಬೆಲೆ  ಇಂದಿನ ಡಿಸೇಲ್​ ದರ  ಇಂದಿನ ಆಯಿಲ್​ ದರ
ಇಂಧನ ದರ

By

Published : Jul 1, 2022, 11:05 AM IST

ಬೆಂಗಳೂರು/ನವದೆಹಲಿ:ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ. ಹಾಗಿದ್ದರೆ ನವದೆಹಲಿ, ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿನ ಇಂಧನ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

ಇಂದಿನ ದರಗಳ ಬಗ್ಗೆ ತಿಳಿಯೋದಾದರೆ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.63 ರೂ. ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ಓದಿ:ಬೆಂಗಳೂರು, ಮಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ರಾಜ್ಯದಲ್ಲಿ ತೈಲ ದರ: ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಯಥಾಸ್ಥಿತಿಯಲ್ಲಿದೆ. ಪೆಟ್ರೋಲ್​ ಲೀಟರ್​ಗೆ 101.96 ರೂ.ಗೆ ಮಾರಾಟವಾಗುತ್ತಿದ್ದರೆ, ಡೀಸೆಲ್ 87.91ರೂ.ಗೆ ಮಾರಾಟವಾಗುತ್ತಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 101.65 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 87.65 ರೂಪಾಯಿ ಇದೆ. ದಾವಣಗೆರೆಯಲ್ಲಿ ಪೆಟ್ರೋಲ್​ ಲೀಟರ್​ಗೆ 103.60 ರೂ.ಗೆ ಮಾರಾಟವಾಗುತ್ತಿದ್ದರೆ, ಡೀಸೆಲ್ 89.50 ರೂ.ಗೆ ಮಾರಾಟವಾಗುತ್ತಿದೆ.

ಶಿವಮೊಗ್ಗದಲ್ಲಿ ಪೆಟ್ರೋಲ್ ಲೀಟರ್​ಗೆ 103.26 ರೂಪಾಯಿ, ​ಡೀಸೆಲ್ 89.04 ರೂ. ಗೆ ಮಾರಾಟವಾಗುತ್ತಿದೆ. ಮೈಸೂರಿನಲ್ಲಿ ಒಂದು ಲೀಟರ್‌ ಪೆಟ್ರೋಲ್​ಗೆ 101.44 ರೂಪಾಯಿ ಇದ್ದು, ಒಂದು ಲೀಟರ್‌ ಡೀಸೆಲ್​ಗೆ 87.43 ರೂಪಾಯಿ ಇದೆ. ಮಂಗಳೂರಲ್ಲಿ ಪೆಟ್ರೋಲ್, ಡೀಸೆಲ್ ದರಲ್ಲಿ 64 ಪೈಸೆ ಇಳಿಕೆಯಾಗಿದೆ. ಪೆಟ್ರೋಲ್ 101.13 ರೂ, ಡೀಸೆಲ್ 87.13 ರೂ ಇದೆ.

ABOUT THE AUTHOR

...view details