ಕೊಯಮತ್ತೂರು : ಕೊಯಮತ್ತೂರು ಕಾರ್ಗೋ ವಿಭಾಗದ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಕುಮಾರ್ (45) ಅವರು ಬಂಟ ರಸ್ತೆಯ ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 2009ರ ಐಪಿಎಸ್ ಬ್ಯಾಚ್‌ನವರಾಗಿದ್ದ ಇವರು, 2022 ಜನವರಿ 6ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್‌ನಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು. ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರ್ನಲ್ಲಿ ಡಿಎಸ್ಪಿಯಾಗಿ ಕೆಲಸ ಮಾಡಿದ್ದಾರೆ.
ನಿನ್ನೆ ರಾತ್ರಿ ಜಿಲ್ಲಾಧಿಕಾರಿ ಸಂದೀಶ್ ಅವರ ಮಗುವಿನ ಹುಟ್ಟುಹಬ್ಬಕ್ಕೆ ವಿಜಯಕುಮಾರ್ ತೆರಳಿದ್ದರು. ಇಂದು ಬೆಳಗ್ಗೆ 6.50ಕ್ಕೆ ವಾಕಿಂಗ್ ಮುಗಿಸಿ ಪಂಥಿಯಾ ಸಲೈನಲ್ಲಿರುವ ಕ್ಯಾಂಪ್ ಕಚೇರಿಗೆ ಬಂದಿದ್ದರು. ಬಳಿಕ, ತಮ್ಮ ಅಂಗರಕ್ಷಕ ರವಿ ಬಳಿ ಪಿಸ್ತೂಲ್ ತೆಗೆದುಕೊಂಡು ಕೋಣೆಗೆ ಹೋದವರು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಡಿಐಜಿ ಅವರ ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಕೊಯಮತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೇ, ಅವರ ಆತ್ಮಹತ್ಯೆಗೆ ಕಾರಣವೇನು? ಎಂದು ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ :ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ : ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆ: ಜಿ.ಪರಮೇಶ್ವರ್