ನವದೆಹಲಿ :ಹಳ್ಳಿಗಳನ್ನು ಡಿಜಿಟಲ್ ಮಾಡುವುದು ಬರೀ ಮಹತ್ವಾಕಾಂಕ್ಷಿಯಗಷ್ಟೇ ಉಳಿಯಬಾರದು. ಅವು ಡಿಜಿಟಲೀಕರಣಗೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಕೇಂದ್ರ ಬಜೆಟ್ ಮೇಲೆ ನಡೆದ ವರ್ಚುಯಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ರಾಡ್‌ಬ್ಯಾಂಡ್ ಸಂಪರ್ಕವು ಹಳ್ಳಿಗಳಲ್ಲಿ ಸೌಲಭ್ಯಗಳನ್ನು ಒದಗಿಸುವುದಲ್ಲದೆ, ಇದು ನುರಿತ ಯುವಕರ ದೊಡ್ಡ ಸಮೂಹವನ್ನು ರೂಪಿಸಲು ಸಹಾಯ ಮಾಡುತ್ತದೆ ಎಂದು ಮೋದಿ ಹೇಳಿದರು.
ಗ್ರಾಮದಲ್ಲಿ ಬ್ರಾಡ್‌ಬ್ಯಾಂಡ್ ಸಂಪರ್ಕದೊಂದಿಗೆ ಸೇವಾ ವಲಯ ವಿಸ್ತಾರವಾಗುತ್ತದೆ. ಆಗ ದೇಶದ ಸಾಮರ್ಥ್ಯವೂ ಹೆಚ್ಚಾಗುತ್ತದೆ. ಆಪ್ಟಿಕಲ್ ಫೈಬರ್ ಸಂಪರ್ಕದಲ್ಲಿ ಸಮಸ್ಯೆಗಳಿದ್ದರೆ ಅವುಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಬೇಕು. ಆಪ್ಟಿಕಲ್ ಫೈಬರ್ ನೆಟ್‌ವರ್ಕ್‌ಗಳ ಬಳಕೆಯ ಬಗ್ಗೆ ಗ್ರಾಮೀಣ ಜನರಿಗೆ ತಿಳಿಸಬೇಕಾಗಿದೆ ಎಂದರು.