ಕರ್ನಾಟಕ

karnataka

ETV Bharat / bharat

ಆಕ್ಸಿಜನ್​ ಸಪೋರ್ಟ್​ನಲ್ಲಿ ಹಿರಿಯ ನಟ ದಿಲೀಪ್ ಕುಮಾರ್: ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರ ಮಾಹಿತಿ

ಭಾರತೀಯ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಭಾನುವಾರ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಬಂದಿರುವ ಮಾಹಿತಿಯ ಪ್ರಕಾರ, ನಟ ಪ್ಲೇರಲ್ ಎಫ್ಯೂಶನ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗ್ತಿದೆ.

dilip-kumar
ಹಿರಿಯ ನಟ ದಿಲೀಪ್ ಕುಮಾರ್

By

Published : Jun 7, 2021, 6:42 PM IST

ಹೈದರಾಬಾದ್​: ದೇಶಾದ್ಯಂತ ಕೊರೊನಾ 2ನೇ ಅಲೆಯ ವೇಗ ಹೆಚ್ಚಿದೆ. ಈ ಸಂದರ್ಭದಲ್ಲಿ ಬಾಲಿವುಡ್‌ನ ಹಿರಿಯ ನಟ ದಿಲೀಪ್ ಕುಮಾರ್ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಅವರಿಗೆ ಆಕ್ಸಿಜನ್ ಸಪೋರ್ಟ್ ನೀಡಲಾಗಿದೆ.

ದಿಲೀಪ್ ಕುಮಾರ್ ಬೈಲಾಟರಲ್ ಪ್ಲೇರಲ್ ಎಫ್ಯೂಶನ್‌ನಿಂದ ಬಳಲುತ್ತಿದ್ದು, ಅವರಿಗೆ ಆಕ್ಸಿಜನ್ ನೀಡಲಾಗಿದೆ. ಅವರ ಆಕ್ಸಿಜನ್ ಸಾಚ್ಯುರೇಶನ್ ಮಟ್ಟದಲ್ಲಿ ಕುಸಿತ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಜಲೀಲ್ ಪಾರ್ಕರ್ ತಿಳಿಸಿದ್ದಾರೆ.

ದಿಲೀಪ್ ಕುಮಾರ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ಐಸಿಯುನಲ್ಲಿಲ್ಲ. ಎಲ್ಲವೂ ಸರಿಹೋದರೆ ಇನ್ನೆರಡು-ಮೂರು ದಿನಗಳಲ್ಲಿ ಡಿಸ್ಚಾರ್ಜ್ ಮಾಡಬಹುದು ಎಂದು ಡಾ.ಜಲೀಲ್ ಪಾರ್ಕರ್ ಮಾಹಿತಿ ನೀಡಿದ್ದಾರೆ.

ದಿಲೀಪ್ ಕುಮಾರ್ ಅವರ ಆರೋಗ್ಯ ವಿಚಾರಿಸಲು ಇಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹಿಂದುಜಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಹಿರಿಯ ನಟನ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿ ಎಂದು ನಟ ಆಯುಷ್‌ಮಾನ್ ಖುರಾನಾ ಸೇರಿದಂತೆ ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಪ್ರಾರ್ಥಿಸಿದ್ದಾರೆ.

ಓದಿ:ಮೇ 20 ರವರೆಗೆ ಆಂಧ್ರದಲ್ಲಿ ಕರ್ಫ್ಯೂ ವಿಸ್ತರಣೆ; ಕೆಲ ಸಡಿಲಿಕೆ

ABOUT THE AUTHOR

...view details